ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನವನ್ನು ಗೌರವಿಸುವ ಸಲುವಾಗಿ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ “ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮದ ಭೂಮಿಪೂಜಾ ಕಾರ್ಯಕ್ರಮದ ಧ್ವಜಾರೋಹಣವನ್ನು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಗಳು ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮತ್ತು ವಿವಿಧ ಮಠಗಳ ಪರಮಪೂಜ್ಯ ಸ್ವಾಮೀಜಿಗಳ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿತು.
ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಜಿ.ಎಂ. ಸಿದ್ದೇಶ್ವರ್, ಎ. ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಮುನಿರತ್ನ, ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಬಿ. ಸುರೇಶ್ ಗೌಡ, ಎಂ. ಚಂದ್ರಪ್ಪ, ಶಾಸಕರು ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

