ಮಂಡ್ಯ: ಹವಾಮಾನ ವೈಪರಿತ್ಯಗಳಿಂದಾಗಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ, ನೀರಿಗೆ ಹಾಹಾಕಾರ ಉಂಟಾಗಲಿದೆ ಎಂದು ಕೋಡಿಮಠದ ಮಹಾಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಮದ್ದೂರಿನಲ್ಲಿ ಮಾತನಾಡಿದ ಸ್ವಾಮೀಜಿ, ದಿನದಿಂದ ದಿನಕ್ಕೆ ಹವಾಮಾನ ವೈಪರೀತ್ಯದಿಂದ ಪ್ರಕೃತಿಯಲ್ಲಿ ಏರುಪೇರು ಆಗುತ್ತಿದೆ. ಅಪಮೃತ್ಯಗಳು ಹೆಚ್ಚಾಗಲಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ನೀರಿನ ಹಾಹಾಕಾರದ ಸಮಸ್ಯೆ ಎದುರಾಗುತ್ತಿದೆ. ಆದರೆ ಕರ್ನಾಟಕಕ್ಕೆ ಯಾವುದೇ ರೀತಿಯ ಸಮಸ್ಯೆ ಉಲ್ಬಣವಾಗುವುದಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ತಮ್ಮ ನಿಖರ ಭವಿಷ್ಯಗಳಿಗೆ ಹೆಸರಾದ ಕೋಡಿಮಠ ಸ್ವಾಮೀಜಿ, ಮದ್ದೂರು ತಾಲೂಕಿನ ಚಾಮನಹಳ್ಳಿಯ ಶ್ರೀ ಬಂಡೇ ಶನೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಪ್ರಕೃತಿಯಲ್ಲಿ ಏರುಪೇರು ಆಗುತ್ತಿದೆ. ಅಪಮೃತ್ಯುಗಳು ಹೆಚ್ಚಾಗಲಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ನೀರಿಗೆ ಸಮಸ್ಯೆ ಎದುರಾಗಲಿದ್ದು, ಪ್ರಕೃತಿಯಲ್ಲಿ ಏರುಪೇರು ಆಗಲಿದೆ. ಆದರೆ ರಾಜ್ಯದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡು ಬರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ದೈವರಾದನೆಗಳು ನಡೆಯುತ್ತಿರುವ ಪರಿಣಾಮ ಮಳೆ ಬೆಳೆಯಿಂದ ಜನ ಸಮೃದ್ಧಿ ಜೀವನ ನಡೆಸುತ್ತಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

