ಇಂದು ( ಏಪ್ರಿಲ್ 27 ) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆರಿಸಿಕೊಂಡು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಅದರಂತೆ ಬ್ಯಾಟಿಂಗ್ ಆರಂಭಿಸಿರುವ ಡೆಲ್ಲಿ ಕೇವಲ 8 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಹೀನಾಯ ಶುರು ಮಾಡಿದೆ.
ಹೀಗೆ ಕೇವಲ 3.5 ಓವರ್ಗಳಲ್ಲಿ 8 ರನ್ ಕಲೆಹಾಕಿ 6 ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅತಿ ಕಡಿಮೆ ಕಳೆದುಕೊಂಡು ಬರೆದುಕೊಂಡಿದ್ದ ಬೇಡದ ದಾಖಲೆಯನ್ನು ಮುರಿಯಲಿದೆಯಾ ಎಂಬ ಪ್ರಶ್ನೆ ಎದ್ದಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೇವಲ 49 ರನ್ಗೆ ಆಲ್ಔಟ್ ಆಗಿತ್ತು. ತನ್ನ ಹೆಸರಿನಲ್ಲಿರುವ ಈ ಕೆಟ್ಟ ದಾಖಲೆಯನ್ನು ಆರ್ಸಿಬಿಯೇ ಮುರಿಯಲಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡು ಪ್ರಾರ್ಥನೆ ಶುರುವಿಟ್ಟುಕೊಂಡಿದ್ದಾರೆ.

