ಬೆಂಗಳೂರು: ಏಪ್ರಿಲ್ 30 ರಿಂದ ಮೇ 13ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ಮನೆಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಗರ, ಹೊರ ವಲಯ, ಸಾಮಾನ್ಯ ಮತ್ತು ವೇಗದೂತ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವಂತೆ ಕೆಎಸ್ಆರ್ಟಿಸಿ ನಿರ್ವಾಹಕರು ಮತ್ತು ಚಾಲಕರಿಗೆ ಸೂಚನೆ ನೀಡಲಾಗಿದೆ.

