HomeKarnatakaBIG NEWS: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ: ಇಬ್ಬರು ಪ್ರಯಾಣಿಕರು ದುರ್ಮರಣ

BIG NEWS: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ: ಇಬ್ಬರು ಪ್ರಯಾಣಿಕರು ದುರ್ಮರಣ

ಹರಿಯಾಣ: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಸಮಯದಲ್ಲೇ ಇಡೀ ಬಸ್ ಧಗಧಗನೆ ಹೊತ್ತಿ ಉರಿದಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ.

ಹರಿಯಾಣದ ಮಿಲ್ಕ್ ಪುರ್ ಗ್ರಾಮದ ಬಳಿ ಖಾಸಗಿ ಬಸ್​​ಗೆ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರಿಬ್ಬರು ಸಜೀವದಹನವಾಗಿದ್ದಾರೆ. ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭಿವಾನಿ-ಹನ್ಸಿ ರಸ್ತೆಯಲ್ಲಿ ಬಸ್ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಬಸ್ ನಲ್ಲಿದ್ದ ಬಹುತೇಕ ಪ್ರಯಾಣಿಕರು ಕೆಳಗಿಳಿದು ಬಚಾವ್ ಆಗಿದ್ದಾರೆ. ಆದರೆ ಇಬ್ಬರು ಪ್ರಯಾಣಿಕರಿಗೆ ಬಸ್ ನಿಂದ ಕೆಳಗಿಳಿಯೌ ಸಾಧ್ಯವಾಗದೇ ಬಸ್ ನಲ್ಲಿಯೇ ಸಿಲುಕಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಹನ್ಸಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular