HomeIndiaBIG NEWS: ಕೆಸರು ಎರಚಿದ ಪ್ರಕರಣ: ಮಹಾರಾಷ್ಟ್ರ ಸಚಿವ ನಿತೇಶ್ ರಾಣೆಗೆ ಒಂದು ತಿಂಗಳ ಜೈಲು...

BIG NEWS: ಕೆಸರು ಎರಚಿದ ಪ್ರಕರಣ: ಮಹಾರಾಷ್ಟ್ರ ಸಚಿವ ನಿತೇಶ್ ರಾಣೆಗೆ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಮುಂಬೈ: ಕೆಸರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ನಾರಾಯಣ ರಾಣೆ ಅವರಿಗೆ ಸ್ಥಳೀಯ ನ್ಯಾಯಾಲಯ 1 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಸಚಿವ ನಿತೇಶ್ ರಾಣೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧುದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. ನಿತೇಶ್ ರಾಣೆ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದೋಷಿ ಎಂದು ಕೋರ್ಟ್ ಘೋಷಿಸಿದ್ದು, 1 ತಿಂಗಳ ಜೈಲು ಶಿಕ್ಷೆಯ ಜೊತೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೊತ್ತದಲ್ಲಿ 50 ಸಾವಿರ ರೂ.ಗಳನ್ನು ಸಂತ್ರಸ್ತ ಎಂಜಿನಿಯರ್‌ಗೆ ಪರಿಹಾರವಾಗಿ ನೀಡಲು ಆದೇಶಿಸಿದೆ. ಶಾಸಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಮತ್ತು ಸಾರ್ವಜನಿಕ ಸೇವಕರ ಘನತೆಗೆ ಧಕ್ಕೆ ತರುವಂತೆ ವರ್ತಿಸಬಾರದು ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ.

ಕೋರ್ಟ್ ಈ ಶಿಕ್ಷೆಯನ್ನು ಪ್ರಕಟಿಸಿದ ಬಳಿಕ ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಇದರಿಂದಾಗಿ ನಿತೇಶ್ ರಾಣೆ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಸಿಕ್ಕಿದ್ದು, ಸದ್ಯಕ್ಕೆ ಬಂಧನದಿಂದ ಪಾರಾಗಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ 29 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕೋರ್ಟ್ ಖುಲಾಸೆಗೊಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular