ಧಾರವಾಡ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಮ್ಮಿನಭಾವಿಯಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರಿಗೆ ಫಿಟ್ಟರ್ ಮತ್ತು ಎಲೆಕ್ಟ್ರೀಷಿಯನ್ ವೃತ್ತಿಗಳಿಗೆ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ಸೈಟ್ www.cite.karnataka.gov.in ಮೂಲಕ ಮೇ 8, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9972946660 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿಯ ಅಂಚಟಗೇರಿ ಡಾ|| ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು, ಧಾರವಾಡ ಶಿಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಹುಬ್ಬಳ್ಳಿ ಸದಾಶಿವನಗರದ ಮೌಲಾನಾ ಆಜಾದ ಆಂಗ್ಲ ಮಾದರಿ ಕಾಲೇಜುಗಳಲ್ಲಿ ಪದವಿ ಪೂರ್ವ ತರಗತಿಗಾಗಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಮೇ 16, 2026 ರೊಳಗಾಗಿ ಆನ್ಲೈನ್ https://dom.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ:0836-2971590, ಪ್ರಾಶುಂಪಾಲರಾದ ವಿಶ್ವನಾಥ ಹುಲಸದಾರ-8310998779, ಶರಣಪ್ಪ ಅಂಗಡಿ–8497847789 ಇರ್ಷಾದ ಅಹ್ಮದ ದೊಡವಾಡ-8867479317 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.

