HomeKarnatakaBREAKING NEWS: SC ಒಳ ಮೀಸಲಾತಿ ಬಗ್ಗೆ ಸರ್ಕಾರ ಅಧಿಕೃತ ಆದೇಶ: 56,432 ಹುದ್ದೆಗಳ ನೇರ...

BREAKING NEWS: SC ಒಳ ಮೀಸಲಾತಿ ಬಗ್ಗೆ ಸರ್ಕಾರ ಅಧಿಕೃತ ಆದೇಶ: 56,432 ಹುದ್ದೆಗಳ ನೇರ ನೇಮಕಾತಿಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

ಬೆಂಗಳೂರು:  ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಬಗ್ಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆ ಮೀಸಲಾತಿ ಹಂಚಿಕೆಯನ್ನು ಪರಿಷ್ಕರಣೆ ಮಾಡಲಾಗಿದೆ.

ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣ ತಾತ್ಕಾಲಿಕವಾಗಿ ಶೇಕಡ 17 ರಿಂದ ಶೇಕಡ 15ಕ್ಕೆ ಸೀಮಿತವಾಗಿದೆ. ಒಟ್ಟಾರೆ ಮೀಸಲಾತಿ ಪ್ರಮಾಣ ಶೇಕಡ 50ರ ಮಿತಿಯೊಳಗೆ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಪರಿಶಿಷ್ಟ ಜಾತಿಯ ಪ್ರವರ್ಗ ಎ ಮತ್ತು ಬಿ ಗೆ ತಲಾ ಶೇಕಡ 5.25, ಪ್ರವರ್ಗ ಸಿ ಗೆ ಶೇ. 4.5ರಷ್ಟು ಹಂಚಿಕೆ ಮಾಡಲಾಗಿದೆ. ಅಲೆಮಾರಿ ಜಾತಿಗಳಿಗೆ ಪ್ರವರ್ಗ ಸಿ ಅಡಿಯಲ್ಲಿ ಶೇಕಡ 20ರಷ್ಟು ವಿಶೇಷ ಮೀಸಲು ನೀಡಲಾಗಿದೆ. ನೇಮಕಾತಿಯಲ್ಲಿ 400 ಬಿಂದುಗಳ ರೋಸ್ಟರ್ ಚಕ್ರ ಕಡ್ಡಾಯ ಅನುಸರಿಸಲು ಸೂಚನೆ ನೀಡಲಾಗಿದೆ.

ಹಳೆಯ ಮೀಸಲಾತಿಯ ಅಧಿಸೂಚನೆಗಳು ರದ್ದಾಗಲಿವೆ. ಹೊಸ ನಿಯಮದಡಿ ಪರಿಷ್ಕೃತ ಅಧಿಸೂಚನೆಗೆ ಆದೇಶಿಸಲಾಗಿದೆ. ಭವಿಷ್ಯದ ತೀರ್ಪು ಆಧರಿಸಿ ಬಾಕಿ ಶೇಕಡ 60 ಹುದ್ದೆಗಳನ್ನು ಬ್ಯಾಕ್ ಲಾಗ್ ಎಂದು ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 56,432 ಹುದ್ದೆಗಳ ನೇರ ನೇಮಕಾತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಈ ಹೊಸ ಮೀಸಲಾತಿ ಆದೇಶ ಹೈಕೋರ್ಟ್ ನ ಅಂತಿಮ ತೀರ್ಪಿಗೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular