HomeIPL 2026IPL 2026: ಪಂಜಾಬ್ vs ರಾಜಸ್ಥಾನ್ ಪಂದ್ಯ ಆರಂಭ; ಟಾಸ್ ಗೆದ್ದ ರಾಜಸ್ಥಾನ್ ಪಂಜಾಬ್ ಗೆಲುವಿನ...

IPL 2026: ಪಂಜಾಬ್ vs ರಾಜಸ್ಥಾನ್ ಪಂದ್ಯ ಆರಂಭ; ಟಾಸ್ ಗೆದ್ದ ರಾಜಸ್ಥಾನ್ ಪಂಜಾಬ್ ಗೆಲುವಿನ ಓಟಕ್ಕೆ ಹಾಕುತ್ತಾ ಬ್ರೇಕ್?

ಇಂದು ( ಏಪ್ರಿಲ್ 28 ) ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 40ನೇ ಪಂದ್ಯ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆರಿಸಿಕೊಂಡು ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಇನ್ನು ರಾಜಸ್ಥಾನ್ ರಾಯಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ 8 ಪಂದ್ಯಗಳನ್ನಾಡಿ ಐದರಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋತು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಏಳು ಪಂದ್ಯಗಳನ್ನಾಡಿ ಆರರಲ್ಲಿ ಗೆದ್ದು ಉಳಿದೊಂದು ಪಂದ್ಯ ರದ್ದಾದ ಕಾರಣ 13 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ಅಗ್ರಸ್ಥಾನದಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗೆ ಟೂರ್ನಿಯಲ್ಲಿ ಸೋಲನ್ನೇ ಕಾರಣ ಪಂಜಾಬ್ ಕಿಂಗ್ಸ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ಮಣಿಸಿ ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿ ಪ್ಲೇಆಫ್ ಹಾದಿ ಸುಲಭ ಮಾಡಿಕೊಳ್ಳುವತ್ತ ಚಿತ್ತ ನೆಟ್ಟಿದೆ.

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಡೊನೋವನ್ ಫೆರೀರಾ, ರವೀಂದ್ರ ಜಡೇಜಾ, ದಸುನ್ ಶಾನಕ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪುಂಜಾ

ಪಂಜಾಬ್ ಕಿಂಗ್ಸ್ ಆಡುವ ಬಳಗ: ಪ್ರಭ್‌ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಕೂಪರ್ ಕೊನೊಲ್ಲಿ, ಸೂರ್ಯಾಂಶ್ ಶೆಡ್ಗೆ, ನೆಹಲ್ ವಾಢೇರಾ, ಮಾರ್ಕಸ್ ಸ್ಟೋಯ್ನಿಸ್, ಮಾರ್ಕೊ ಜ್ಯಾನ್ಸನ್, ಲಾಕಿ ಫರ್ಗ್ಯೂಸನ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಲ್

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular