HomeKarnatakaBREAKING : ಹಾಸನದಲ್ಲಿ ಘೋರ ದುರಂತ : ಹೇಮಾವತಿ ನಾಲೆಗೆ ಕಾರು ಉರುಳಿ ಬಿದ್ದು ತಾಯಿ-ಮಗು...

BREAKING : ಹಾಸನದಲ್ಲಿ ಘೋರ ದುರಂತ : ಹೇಮಾವತಿ ನಾಲೆಗೆ ಕಾರು ಉರುಳಿ ಬಿದ್ದು ತಾಯಿ-ಮಗು ಸಾವು, ಐವರಿಗೆ ಗಾಯ

ಹಾಸನ : ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಲ್ಲಘಟ್ಟ ಬಳಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತ ಸಂಭವಿಸಿದೆ. ಧರ್ಮಸ್ಥಳಕ್ಕೆ ತೆರಳಿ ವಾಪಸಾಗುತ್ತಿದ್ದ ಕುಟುಂಬದ ಕಾರು ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಉರುಳಿ ಬಿದ್ದ ಪರಿಣಾಮ ತಾಯಿ ಮತ್ತು ಒಂದೂವರೆ ವರ್ಷದ ಮಗು ಮೃತಪಟ್ಟಿದ್ದಾರೆ.

ಧರ್ಮಸ್ಥಳದ ದರ್ಶನ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಕುಟುಂಬಕ್ಕೆ ವಿಧಿ ಆಟವಾಡಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಲ್ಲಘಟ್ಟದ ಬಳಿ ಕಾರು ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ತಾಯಿ ಮತ್ತು ಚಿಕ್ಕ ಕಂದಮ್ಮ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯಿಂದ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.

ಮೃತರನ್ನು ಪ್ರಿಯಾಂಕಾ (30) ಮತ್ತು ಅವರ ಒಂದೂವರೆ ವರ್ಷದ ಮಗು ಎಂದು ಗುರುತಿಸಲಾಗಿದೆ. ಈ ಕುಟುಂಬವು ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಮುಗಿಸಿಕೊಂಡು ವಾಪಸ್ ಬರುತ್ತಿತ್ತು. ಮಲ್ಲಘಟ್ಟದ ಸಮೀಪವಿರುವ ಹೇಮಾವತಿ ನಾಲೆಯ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ನಾಲೆಯ ನೀರಿಗೆ ಬಿದ್ದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ರಕ್ಷಣೆಗೆ ಧಾವಿಸಿದ್ದಾರೆ.ಕಾರಿನಲ್ಲಿದ್ದ ಇತರ ಸದಸ್ಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕೂಡಲೇ ಚನ್ನರಾಯಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನಾಲೆಯಲ್ಲಿ ನೀರಿನ ಹರಿವು ಹೆಚ್ಚಿದ್ದರಿಂದ ತಾಯಿ ಮತ್ತು ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular