ಬೆಂಗಳೂರು: ಸ್ಯಾಂಡಲ್ವುಡ್ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಈಗ ಹೊಸ ಅತಿಥಿಯ ಆಗಮನದ ಸಂಭ್ರಮದಲ್ಲಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಹೌದು. ಸ್ಯಾಂಡಲ್ವುಡ್ನ ‘ಟಗರು’ ಖ್ಯಾತಿಯ ನಟ ಧನಂಜಯ್ ಮನೆಯಲ್ಲಿ ಈಗ ಸಂಭ್ರಮವೋ ಸಂಭ್ರಮ. ನಟ ಧನಂಜಯ್ ಮತ್ತು ಧನ್ಯತಾ ದಂಪತಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸ್ಯಾಂಡಲ್ವುಡ್ನ ಮೋಸ್ಟ್ ಫೇವರಿಟ್ ಜೋಡಿಯಿಂದ ಹೊರಬಿದ್ದಿರುವ ಈ ಸಿಹಿ ಸುದ್ದಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಧನಂಜಯ್ ಮತ್ತು ಧನ್ಯತಾ ದಂಪತಿ ತಾವು ತಂದೆ-ತಾಯಿಯಾಗುತ್ತಿರುವ ವಿಷಯವನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.ಈ ಸುದ್ದಿ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಡಾಲಿ ದಂಪತಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.ಇತ್ತೀಚೆಗಷ್ಟೇ ಹಸೆಮಣೆ ಏರಿದ್ದ ಈ ಜೋಡಿ ಈಗ ಜೀವನದ ಹೊಸ ಘಟ್ಟಕ್ಕೆ ಕಾಲಿಡುತ್ತಿರುವುದು ಅವರ ಕುಟುಂಬದಲ್ಲಿ ಸಡಗರ ತಂದಿದೆ.
A post shared by Dr. Dhanyatha Gauraklar (@dr.dhanyatha_gauraklar)

