HomeLatest NewsSHOCKING : ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 6 ವರ್ಷದ ಬಾಲಕಿ ಸಾವು!

SHOCKING : ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 6 ವರ್ಷದ ಬಾಲಕಿ ಸಾವು!

ಅನಂತಪುರ : ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಯಾಡಿಕಿ ಮಂಡಲದ ಚಂದನ ಗ್ರಾಮದಲ್ಲಿ ಆರು ವರ್ಷದ ಬಾಲಕಿ ನೈನಿಕಾ ಹೃದಯಾಘಾತದಿಂದ ಮೃತಪಟ್ಟಿರುವುದು ತೀವ್ರ ವಿಷಾದ ಮೂಡಿಸಿದೆ.

ಹೌದುಲ ಆಟವಾಡುತ್ತಾ ಖುಷಿಯಾಗಿದ್ದ ಮನೆಯಲ್ಲಿ ಮೌನ ಆವರಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಯಾಡಿಕಿ ಮಂಡಲದ ಚಂದನ ಗ್ರಾಮದಲ್ಲಿ 6 ವರ್ಷದ ಬಾಲಕಿಯೊಬ್ಬಳು ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಕಣ್ಮುಂದೆಯೇ ಅಪ್ಪಟವಾಗಿ ಬೆಳೆಯುತ್ತಿದ್ದ ಮಗು ನೈನಿಕಾ, ಅಕಾಲಿಕ ಮರಣಕ್ಕೆ ತುತ್ತಾಗಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.

ಬಾಲಕಿ ನೈನಿಕಾ ತನ್ನ ಸ್ನೇಹಿತರೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದಳು. ಆಟವಾಡುತ್ತಿದ್ದ ಸಮಯದಲ್ಲಿ ಬಾಲಕಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಪೋಷಕರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆದರೆ, ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಆಕೆ ಆಸ್ಪತ್ರೆಗೆ ತರುವಷ್ಟರಲ್ಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಪುಟ್ಟ ಮಗುವಿನ ಸಾವಿಗೆ ಹೃದಯಾಘಾತವೇ (Heart Attack) ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಣ್ಮುಂದೆಯೇ ಅಪ್ಪಟವಾಗಿ ನಗುನಗುತ್ತಾ ಬೆಳೆಯುತ್ತಿದ್ದ ಮಗು, ಆಟವಾಡುತ್ತಲೇ ಅನಂತ ಲೋಕಕ್ಕೆ ಪಯಣಿಸಿರುವುದು ಆ ಕುಟುಂಬಕ್ಕೆ ಹಾಗೂ ಇಡೀ ಗ್ರಾಮಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಅಷ್ಟು ಸಣ್ಣ ವಯಸ್ಸಿನ ಮಗು ಹೃದಯಾಘಾತದಿಂದ ಸಾವನ್ನಪ್ಪಿರುವುದು ಸ್ಥಳೀಯವಾಗಿ ತೀವ್ರ ಆತಂಕ ಮತ್ತು ಕಳವಳಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular