HomeKarnatakaಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 8625 ರೂ. ಶೈಕ್ಷಣಿಕ ಸಾಮಗ್ರಿ...

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 8625 ರೂ. ಶೈಕ್ಷಣಿಕ ಸಾಮಗ್ರಿ ಕಿಟ್ ವಿತರಣೆ

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 1ರಿಂದ 12ನೇ ತರಗತಿಯಲ್ಲಿರುವ ಮಕ್ಕಳಿಗೆ ವಿವಿಧ ಲೇಖನ ಸಾಮಗ್ರಿಗಳು ಮತ್ತು ಪುಸ್ತಕ ಒಳಗೊಂಡ ಕಿಟ್ ಗಳನ್ನು ಕಾರ್ಮಿಕ ಇಲಾಖೆಯಿಂದ ವಿತರಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

115.84 ಕೋಟಿ ರೂ. ವೆಚ್ಚದಲ್ಲಿ ಕಿಟ್ ವಿತರಿಸಲಿದ್ದು, ಪ್ರತಿ ಕಿಟ್ ಗೆ 8625 ರೂ. ವೆಚ್ಚವಾಗಲಿದೆ. ಪುಸ್ತಕ, ನೋಟ್ ಪುಸ್ತಕ, ಪೆನ್, ಪೆನ್ಸಿಲ್ ಸೇರಿದಂತೆ ಶೈಕ್ಷಣಿಕ ಸಾಮಗ್ರಿ ಒಳಗೊಂಡ ಕಿಟ್ ಗಳನ್ನು ವಿತರಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ನವಜಾತ ಶಿಶುಗಳಲ್ಲಿ ಅಪರೂಪದ ಜನ್ಮಜಾತ ಚಯಾಪಚಯ ಅಸ್ವಸ್ಥತೆಗಳನ್ನು ಪತ್ತೆಹಚ್ಚಲು ಸಾರ್ವಜನಿಕ ನವಜಾತ ಶಿಶು ತಪಾಸಣೆ ಯೋಜನೆಯನ್ನು 55.89 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸಂಪುಟ ಸಭೆ ತೀರ್ಮಾನಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ಉಚಿತ ಆರೋಗ್ಯ ಪತ್ತೆ ಸೇವೆ ಕಾರ್ಯಕ್ರಮದ ಅಡಿ 81 ಕೋಟಿ ರೂ. ಅಂದಾಜು ವೆಚ್ಚದಲ್ಲಿ 6 ಎಂಆರ್ಐ ಯಂತ್ರಗಳನ್ನು 6 ಜಿಲ್ಲಾಸ್ಪತ್ರೆಗಳಿಗೆ ನೀಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜ್ಯದ ಪ್ರಮುಖ ನಗರಗಳ ನಡುವೆ ವಿಮಾನಸೇವೆ ನಿರ್ವಹಣೆ ಉತ್ತೇಜಿಸಲು ಬೆಂಗಳೂರು –ಕಲಬುರಗಿ- ಬೆಂಗಳೂರು, ಬೆಂಗಳೂರು-ಬೀದರ್- ಬೆಂಗಳೂರು ನಡುವೆ ವಿಮಾನ ಸೇವೆ ನಿರ್ವಹಣೆಗೆ ವಾರ್ಷಿಕ 28.47 ಕೋಟಿ ರೂ. ಪ್ರೋತ್ಸಾಹಧನ ನೀಡಲು ಸಮ್ಮತಿಸಿದೆ.

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular