HomeKarnatakaಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ರಿಯಾಯಿತಿಯೊಂದಿಗೆ ತೆರಿಗೆ ಪಾವತಿ ಅವಧಿ ಮೇ 31ರವರೆಗೆ ವಿಸ್ತರಣೆ

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ರಿಯಾಯಿತಿಯೊಂದಿಗೆ ತೆರಿಗೆ ಪಾವತಿ ಅವಧಿ ಮೇ 31ರವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಸಿಹಿ ಸುದ್ದಿ ನೀಡಿದೆ. ರಿಯಾಯಿತಿ ದರದೊಂದಿಗೆ ತೆರ್ಗೆ ಪಾವತಿ ದಿನಾಂಕವನ್ನು ವಿಸ್ತರಣೆ ಮಾಡಿದೆ.

ಶೇ 5ರ ರಿಯಾಯಿತಿಯೊಂದಿಗೆ ಆಸ್ತಿ ತೆರಿಗೆ ಪಾವತಿಸುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿದ್ದ ಗೊಂದಲ ಮತ್ತು ಸಾರ್ವಜನಿಕರ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದ ಗ್ರೇಟರ್ ಬೆಂಗಳೂರು ಪ್ರದೇಶದ (GBA) ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ಪ್ರಯೋಜನವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾನ್ಯವಾಗಿ ಏಪ್ರಿಲ್ ಅಂತ್ಯಕ್ಕೆ ಈ ರಿಯಾಯಿತಿ ಅವಧಿ ಮುಕ್ತಾಯವಾಗುತ್ತಿತ್ತು. ಆದರೆ, ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಉಂಟಾಗಿದ್ದ ಗೊಂದಲಗಳ ಕುರಿತು ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಶನ್ ಸೇರಿದಂತೆ ಹಲವು ಸಂಘಟನೆಗಳು ಕಳವಳ ವ್ಯಕ್ತಪಡಿಸಿದ್ದವು. ವಿಶೇಷವಾಗಿ ಬಲ್ಕ್ ವೇಸ್ಟ್ ಜನರೇಟರ್‌ಗಳ ವರ್ಗೀಕರಣದಲ್ಲಿನ ಅಸ್ಪಷ್ಟತೆಯಿಂದಾಗಿ ತೆರಿಗೆ ಪಾವತಿಸಲು ಮಾಲೀಕರು ವಿಳಂಬ ಮಾಡಿದ್ದರು. ಇದಲ್ಲದೆ, ಮೇ ತಿಂಗಳಲ್ಲಿ ಶಾಲಾ ಶುಲ್ಕದಂತಹ ಪ್ರಮುಖ ಗೃಹ ವೆಚ್ಚಗಳು ಬರುವುದರಿಂದ, ಈ ರಿಯಾಯಿತಿ ಅವಧಿಯನ್ನು ವಿಸ್ತರಿಸಬೇಕೆಂದು ಸಾರ್ವಜನಿಕರಿಂದ ಬೇಡಿಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಸ್ಪಂದಿಸಿದೆ.

ಜಿಬಿಎ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ತೆರಿಗೆ ಸಂಗ್ರಹದಲ್ಲಿ ಸುಮಾರು 500 ಕೋಟಿ ರೂಪಾಯಿಗಳ ಕೊರತೆ ಕಂಡುಬಂದಿದೆ. ಕಳೆದ ವರ್ಷ ಸುಮಾರು 1,500 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿತ್ತು. ಏಪ್ರಿಲ್ 16 ರಂದು ತೆರಿಗೆ ಪಾವತಿಯಲ್ಲಿದ್ದ ತಾಂತ್ರಿಕ ಗೊಂದಲಗಳನ್ನು ಸರಿಪಡಿಸಲಾಗಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ತೆರಿಗೆ ಪಾವತಿಯಾಗಿಲ್ಲ. ಹೀಗಾಗಿ, ಹೆಚ್ಚಿನ ಸಮಯ ನೀಡುವುದರಿಂದ ಮಾಲೀಕರು ತೆರಿಗೆ ಪಾವತಿಸಲು ಆಸಕ್ತಿ ತೋರಿಸುತ್ತಾರೆ ಮತ್ತು ಪಾಲಿಕೆಯ ಆದಾಯದ ಕೊರತೆಯನ್ನು ನೀಗಿಸಬಹುದು ಎಂಬುದು ಲೆಕ್ಕಾಚಾರ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular