HomeKarnatakaಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಬೆಂಗಳೂರು: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು(ಪಿಡಿಒ), ಕಾರ್ಯದರ್ಶಿ  ಗ್ರೇಡ್ -1, ಕಾರ್ಯದರ್ಶಿ ಗ್ರೇಡ್ -2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಹೊರಗುತ್ತಿಗೆ ಸಿಬ್ಬಂದಿ ಸೇರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ.

ಪಿಡಿಒ, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ನೌಕರರು ಕಡ್ಡಾಯವಾಗಿ ಪ್ರತಿದಿನ ಪಂಚತಂತ್ರ 2.0 ತಂತ್ರಾಂಶದಲ್ಲಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವುದನ್ನು ಕಡ್ಡಾಯಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪಿಡಿಒ, ಕಾರ್ಯದರ್ಶಿಗಳು ಇಂತಿಷ್ಟು ಸಮಯ ಕಚೇರಿಯಲ್ಲಿ ಇರಬೇಕು. ಪಿಡಿಒಗಳು ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಪ್ರತಿದಿನ ಸಮಯ ನಿಗದಿ ಮಾಡಬೇಕು. ಸೋಮವಾರದಿಂದ ಶನಿವಾರದವರೆಗೆ ಪ್ರವಾಸದ ವಿವರವನ್ನು ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಬೇಕು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ -1, ಗ್ರೇಡ್ -2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಾರ್ಯಾಲಯದಲ್ಲಿ ಇದ್ದು ಕಾರ್ಯನಿರ್ವಹಿಸಬೇಕು. ಬಯೋಮೆಟ್ರಿಕ್ ಆಧಾರದ ಮೇಲೆ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗಿದೆ.

ಕರ್ನಾಟಕದಾದ್ಯಂತ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿಯನ್ನು ಹೆಚ್ಚಿಸಲು ಸರ್ಕಾರವು ನಿರ್ಧಾರ ಕೈಗೊಂಡಿದೆ.

ಯಾರಿಗೆ ಕಡ್ಡಾಯ: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು, ಸ್ವಚ್ಛತಾಗಾರರು ಮತ್ತು ನೀರುಗಂಟಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು.

ಹಾಜರಾತಿಯನ್ನು ಪಂಚತಂತ್ರ 2.0 ತಂತ್ರಾಂಶದ ಮೂಲಕ ಮೊಬೈಲ್ ಅಥವಾ ಬಯೋಮೆಟ್ರಿಕ್ ಯಂತ್ರ ಬಳಸಿ ದಾಖಲಿಸಬೇಕಾಗಿದೆ.

ಪಿಡಿಒಗಳು ವಾರದ ಸೋಮವಾರದಿಂದ ಶನಿವಾರದವರೆಗೆ ತಾವು ಮಾಡುವ ಪ್ರವಾಸ (ಫೀಲ್ಡ್ ವಿಸಿಟ್) ಮತ್ತು ಮೀಟಿಂಗ್‌ಗಳ ವಿವರವನ್ನು ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಿಸಬೇಕು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular