ಬೆಂಗಳೂರು: ಸ್ಯಾಂಡಲ್ ವುಡ್ ಜನಪ್ರಿಯ ನಟ ‘ಡಾಲಿ’ಧನಂಜಯ್ ತಂದೆಯಾಗಿದ್ದಾರೆ. ಅವರ ಪತ್ನಿ ಧನ್ಯತಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಅವರ ಮನೆಯಲ್ಲೀಗ ಹೊಸ ಸದಸ್ಯರ ಆಗಮನದ ಸಂಭ್ರಮ ಮನೆ ಮಾಡಿದೆ. ತಮ್ಮ ಮೊದಲ ಮಗುವಿನ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಡಾಲಿ ಧನಂಜಯ್ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.
ಸೂರ್ಯ ಉದಯಿಸುತ್ತಿದ್ದಂತೆ, ನಮ್ಮ ದೊಡ್ಡ ಸಂತೋಷ, ನಮ್ಮ ಗಂಡು ಮಗು ಎಂದು ಮಗುವಿನ ಕೈ ಫೋಟೋ ಹಾಕಿ ಅಭಿಮಾನಿಗಳಿಗೆ ಸಂತೋಷದ ವಿಚಾರ ತಿಳಿಸಿದ್ದಾರೆ. ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

