HomeKarnatakaತಾತನಾದ DCM ಡಿ.ಕೆ.ಶಿವಕುಮಾರ್ : ಶುಭಕೋರಿದ ಸಂಸದ ತೇಜಸ್ವಿ ಸೂರ್ಯ ಪೋಸ್ಟ್ ವೈರಲ್.!

ತಾತನಾದ DCM ಡಿ.ಕೆ.ಶಿವಕುಮಾರ್ : ಶುಭಕೋರಿದ ಸಂಸದ ತೇಜಸ್ವಿ ಸೂರ್ಯ ಪೋಸ್ಟ್ ವೈರಲ್.!

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾತನಾಗಿದ್ದಾರೆ. ಅವರ ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಶುಭ ಸಂದರ್ಭದಲ್ಲಿ ರಾಜಕೀಯ ವೈರತ್ವವನ್ನು ಬದಿಗಿಟ್ಟು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಕೋರಿದ್ದು, ಅವರ ಈ ಸಾಮಾಜಿಕ ಜಾಲತಾಣದ ಪೋಸ್ಟ್ ಸದ್ಯ ಭಾರಿ ಗಮನ ಸೆಳೆದಿದೆ.

ವೈಯಕ್ತಿ ಕಕ್ಷಣಗಳ ಮಹತ್ವ ಎತ್ತಿಹಿಡಿದ ಪೋಸ್ಟ್ : ಸಾರ್ವಜನಿಕ ಮತ್ತು ರಾಜಕೀಯ ಜೀವನದಲ್ಲಿ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ, ವೈಯಕ್ತಿಕ ಜೀವನದ ಸಂತೋಷದ ಕ್ಷಣಗಳು ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ಈ ಪೋಸ್ಟ್ ಎತ್ತಿ ಹಿಡಿದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ರಾಜಕೀಯ ನಾಯಕರ ಈ ಸೌಹಾರ್ದಯುತ ನಡೆಗೆ ನೆಟ್ಟಿಗರು ಮತ್ತು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ತೇಜಸ್ವಿ ಸೂರ್ಯ ಪೋಸ್ಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ. ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, “ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ” ಎಂದರು ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರು. The first casualty of public life is personal life ಅಂತ ಮಾತಿದೆ. ಇಂತಹ ಸಂದರ್ಭಗಳಲ್ಲಿ ಆ ಮಾತಿನ ಅರ್ಥ ಇನ್ನಷ್ಟು ಸ್ಪಷ್ಟವಾಗುತ್ತದೆ. ತಾತನಾದ ಡಿ ಕೆ ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/Tejasvi_Surya/status/2050256338643779783

https://twitter.com/Tejasvi_Surya/status/2050256338643779783

https://twitter.com/Tejasvi_Surya/status/2050256338643779783

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular