HomeKarnatakaBREAKING : ‘SSLC’ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ.!

BREAKING : ‘SSLC’ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ವಿದ್ಯಾರ್ಥಿನಿ ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ.!

ಬೆಂಗಳೂರು: ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ಶೇಕಡಾ 90 ರಷ್ಟು ಅಂಕಗಳನ್ನು ಗಳಿಸಿ ಟಾಪರ್ ಆಗಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೈರೇಗೌಡನಹಳ್ಳಿಯಲ್ಲಿ ನಡೆದಿದೆ.

ಘಟನೆಯ ವಿವರ: ಚಿಕ್ಕಬಳ್ಳಾಪುರ ಮೂಲದ ರಾಘವೇಂದ್ರ ಮತ್ತು ಜ್ಯೋತಿ ದಂಪತಿಯ ಪುತ್ರಿ ಸಂಧ್ಯಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಸಂಧ್ಯಾ ತನ್ನ ವಿದ್ಯಾಭ್ಯಾಸಕ್ಕಾಗಿ ನೆಲಮಂಗಲದ ಬೈರೇಗೌಡನಹಳ್ಳಿಯಲ್ಲಿರುವ ತನ್ನ ಅಕ್ಕ ಶೈಲಜಾ ಅವರ ಮನೆಯಲ್ಲಿ ವಾಸವಾಗಿದ್ದಳು.

ಇತ್ತೀಚೆಗಷ್ಟೇ ಪ್ರಕಟಗೊಂಡ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಂಧ್ಯಾ ಶೇಕಡಾ 90 ರಷ್ಟು ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಳು. ಮುಂದೆ ಮೆಡಿಕಲ್ ಓದಬೇಕೆಂಬ ದೊಡ್ಡ ಆಸೆ ಹೊಂದಿದ್ದ ಆಕೆ, ನಿನ್ನೆಯಷ್ಟೇ ಕಾಲೇಜು ಪ್ರವೇಶಕ್ಕಾಗಿ ಅರ್ಜಿಯನ್ನು ತಂದಿದ್ದಳು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಮನೆಯಲ್ಲಿ ಅಜ್ಜಿಗೆ ಆರೋಗ್ಯ ಸರಿ ಇಲ್ಲದ ಕಾರಣ ಕುಟುಂಬದ ಸದಸ್ಯರೆಲ್ಲರೂ ಆಸ್ಪತ್ರೆಗೆ ತೆರಳಿದ್ದರು. ಮನೆಯಲ್ಲಿ ಸಂಧ್ಯಾ ಒಬ್ಬಳೇ ಇದ್ದಾಗ ಈ ಘಟನೆ ನಡೆದಿದೆ. ಕುಟುಂಬದವರು ಆಸ್ಪತ್ರೆಯಿಂದ ವಾಪಸ್ ಬಂದು ನೋಡಿದಾಗ ಸಂಧ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಟಾಪರ್ ಆಗಿದ್ದ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಡೆತ್ ನೋಟ್ ಪತ್ತೆ: ಆತ್ಮಹತ್ಯೆಗೂ ಮುನ್ನ ಬಾಲಕಿ ಸಂಧ್ಯಾ ಡೆತ್ ನೋಟ್ ಬರೆದಿದ್ದು, ಅದರಲ್ಲಿ “ಸಾರಿ ಅಪ್ಪ” ಎಂದು ಬರೆದಿಟ್ಟು ಜೀವನವನ್ನು ಕೊನೆಗಾಣಿಸಿಕೊಂಡಿದ್ದಾಳೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular