HomeKarnatakaಬಳ್ಳಾರಿ ಜಿಲ್ಲಾಡಳಿತದಿಂದ ಮುಂದುವರೆದ ತೆರವು ಕಾರ್ಯಾಚರಣೆ : ಸರ್ಕಾರದ ವಶಕ್ಕೆ 15.05 ಎಕರೆ ಜಮೀನು

ಬಳ್ಳಾರಿ ಜಿಲ್ಲಾಡಳಿತದಿಂದ ಮುಂದುವರೆದ ತೆರವು ಕಾರ್ಯಾಚರಣೆ : ಸರ್ಕಾರದ ವಶಕ್ಕೆ 15.05 ಎಕರೆ ಜಮೀನು

ಬಳ್ಳಾರಿ : ಜಿಲ್ಲಾಡಳಿತದಿಂದ ಸರ್ಕಾರದ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಬಳ್ಳಾರಿ (ಗ್ರಾಮಾಂತರ) ಗ್ರಾಮದ ವ್ಯಾಪ್ತಿಯಲ್ಲಿ ಬರುವ ವಿವಿಧ ಸರ್ವೆ ನಂಬರ್‌ಗಳ ಒಟ್ಟು 15.05 ಎಕರೆ ಜಮೀನನ್ನು ಜಿಲ್ಲಾಡಳಿತ ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ.

ಈಗಾಗಲೇ ಸರ್ಕಾರದ ಜಾಗ ಎಂದು ಗುರುತಿಸಲಾಗಿದ್ದ ಬಳ್ಳಾರಿ ಗ್ರಾಮಾಂತರ ವ್ಯಾಪ್ತಿಯ ಸರ್ವೆ ನಂಬರ್ 977 ರ 9.20 ಎಕರೆ, ಸರ್ವೆ ನಂಬರ್ 976 ರ 4.72 ಎಕರೆ ಮತ್ತು ಸರ್ವೆ ನಂಬರ್ 813 ರ 1.13 ಎಕರೆ ಸೇರಿದಂತೆ ಒಟ್ಟು 15.05 ಎಕರೆ ಜಮೀನುಗಳನ್ನು ಶನಿವಾರ ಅಧಿಕೃತವಾಗಿ ಜಿಲ್ಲಾಡಳಿತದ ಸುಪರ್ದಿಗೆ ಪಡೆಯಲಾಯಿತು.

ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಸೇರಿದಂತೆ ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಇತರರು ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular