HomeLatest Newsಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ

ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಂದ ವೀರ ಬಹದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಮಾಜಾಳಿ, ಕಾರವಾರದಲ್ಲಿ ನೀಡುವ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಪ್ರವರ್ಗ-1 ಕ್ಕೆ ರೂ. 2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1.00 ಲಕ್ಷಗಳ ಮಿತಿಯಲ್ಲಿರಬೇಕು. ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣನಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ. 45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು ಅಭ್ಯರ್ಥಿಯ ವಯಸ್ಸು 17 ರಿಂದ 20ರೊಳಗಿರಬೇಕು. ಮೇ.28 ಕ್ಕೆ ಅನ್ವಯಿಸುವಂತೆ ದಿ:28-05-2006 ರಿಂದ 28-05-2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಮೇ 28 ರೊಳಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ನೆಲಮಹಡಿ, ಕೊಠಡಿ ಸಂಖ್ಯೆ 01, ಕಾರವಾರ 58130 ಇಲ್ಲಿಗೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08382-226588 ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular