ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಮಹಿಳೆಯ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲಾಗಿದೆ.
ಚಂದ್ರ(41) ಕೊಲೆ ಆರೋಪಿಯಾಗಿದ್ದಾನೆ. 35 ವರ್ಷದ ಮಹಿಳೆ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಾಗ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಮಹಿಳೆಯ ಪತಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು, ಅದೇ ಗ್ರಾಮದ ಚಂದ್ರನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು. ಏಪ್ರಿಲ್ 28ರಂದು ಮಹಿಳೆ ಮನೆಗೆ ಬಂದಿದ್ದ ಚಂದ್ರ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಆಕ್ರೋಶದಿಂದ ಆಕೆಯ ಮೇಲೆ ಹಲ್ಲೆ ನಡೆಸಿ ಮರ್ಮಾಂಗಕ್ಕೆ ಕಾಲಿನಿಂದ ಒದ್ದಿದ್ದಾನೆ. ಏಪ್ರಿಲ್ 30 ರಂದು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಯಸಳೂರು ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

