ದಾವಣಗೆರೆ: ಬೆಣ್ಣೆ ನಗರಿಯ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆಯಲ್ಲಿ ಮೊದಲ ಹಂತದ ಫಲಿತಾಂಶ ಹೊರಬಿದ್ದಿದೆ. ತೀವ್ರ ಕುತೂಹಲ ಮೂಡಿಸಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಅಂಚೆ ಮತಗಳ ಎಣಿಕೆಯಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ಆರಂಭಿಕ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರಿಗೆ 8 ಮತಗಳ ಅಲ್ಪ ಮುನ್ನಡೆ ಸಿಕ್ಕಿದೆ.
ಎಣಿಕೆ ಹಂತ: ಸದ್ಯ ಅಂಚೆ ಮತಗಳ ಎಣಿಕೆ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದ್ದು, ಶೀಘ್ರದಲ್ಲೇ ಇವಿಎಂ ಯಂತ್ರಗಳ ಎಣಿಕೆ ಆರಂಭವಾಗಲಿದೆ.
ಇದು ಕೇವಲ ಆರಂಭಿಕ ಹಂತದ ಮುನ್ನಡೆಯಾಗಿದ್ದರೂ, ಶಾಮನೂರು ಕುಟುಂಬದ ಭದ್ರಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ ಅವರು ಇವಿಎಂ ಎಣಿಕೆಯಲ್ಲಿ ತಿರುಗೇಟು ನೀಡುತ್ತಾರಾ ಅಥವಾ ಸಮರ್ಥ್ ತಮ್ಮ ಮುನ್ನಡೆಯನ್ನು ಕಾಯ್ದುಕೊಳ್ಳುತ್ತಾರಾ ಎಂಬುದು ಮುಂದಿನ ಒಂದು ಗಂಟೆಯಲ್ಲಿ ಸ್ಪಷ್ಟವಾಗಲಿದೆ.ನಗರದ ಡಿಆರ್‌ಆರ್ ವಿದ್ಯಾಸಂಸ್ಥೆಯಲ್ಲಿ ಬಿಗಿ ಭದ್ರತೆಯ ನಡುವೆ ಎಣಿಕೆ ಮುಂದುವರಿದಿದೆ.

