HomeKarnatakaBREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ ; ರಾಜ್ಯ...

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ ; ರಾಜ್ಯ ಸರ್ಕಾರಕ್ಕೆ ನೋಟಿಸ್ !

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್, ಪ್ರಕರಣದ ತನಿಖಾ ಪ್ರಗತಿ ಹಾಗೂ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 273 ಸಾಕ್ಷಿಗಳ ವಿಚಾರಣೆ ಬಾಕಿ ಇರುವುದರಿಂದ ಹಾಗೂ ತಮ್ಮ ಅನಾರೋಗ್ಯದ ಕಾರಣ ನೀಡಿ ದರ್ಶನ್ ಮತ್ತೊಮ್ಮೆ ಜಾಮೀನಿಗಾಗಿ ಸುಪ್ರೀಂನಲ್ಲಿ ಕಾನೂನು ಹೋರಾಟ ಮುಂದುವರಿಸಿದ್ದಾರೆ.

ಹೊಸ ಜಾಮೀನು ಅರ್ಜಿ ಸಲ್ಲಿಕೆ: ಈ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಬಳಿಕ, ನಟ ದರ್ಶನ್ ಅವರು ಸುಪ್ರೀಂ ಕೋರ್ಟ್‌ಗೆ ಮತ್ತೊಮ್ಮೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆ ವಿಳಂಬದ ಆಧಾರ: ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳಿದ್ದು, ಈವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ಪೂರ್ಣಗೊಂಡಿದೆ. ವಿಚಾರಣೆ ಮುಗಿಯಲು ಇನ್ನೂ ಹಲವು ವರ್ಷಗಳು ತೆಗೆದುಕೊಳ್ಳಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಆರೋಗ್ಯ ಹಾಗೂ ಜೈಲಿನ ಸಮಸ್ಯೆಗಳ ಅಳಲು: ದೀರ್ಘಕಾಲದ ಜೈಲುವಾಸದಿಂದ ವೃತ್ತಿಜೀವನಕ್ಕೆ ತೊಂದರೆಯಾಗುತ್ತಿದೆ ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ ಬೆನ್ನು ನೋವಿನ ಸಮಸ್ಯೆ ಮತ್ತು ಜೈಲಿನಲ್ಲಿ ತಮಗೆ ಎದುರಾಗುತ್ತಿರುವ ಕಷ್ಟಗಳ ಬಗ್ಗೆಯೂ ಅರ್ಜಿಯಲ್ಲಿ ವಿವರಿಸಲಾಗಿದೆ.

ಸುಪ್ರೀಂ ಕೋರ್ಟ್ ನೋಟಿಸ್: ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಸ್ಥಿತಿಗತಿ ಹಾಗೂ ವಿಚಾರಣೆಯ ಪ್ರಗತಿಯ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದೆ.ಈ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಬಳಿಕ, ನಟ ದರ್ಶನ್ ಅವರು ಸುಪ್ರೀಂ ಕೋರ್ಟ್‌ಗೆ ಮತ್ತೊಮ್ಮೆ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳಿದ್ದು, ಈವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ಪೂರ್ಣಗೊಂಡಿದೆ. ವಿಚಾರಣೆ ಮುಗಿಯಲು ಇನ್ನೂ ಹಲವು ವರ್ಷಗಳು ತೆಗೆದುಕೊಳ್ಳಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಆರೋಗ್ಯ ಹಾಗೂ ಜೈಲಿನ ಸಮಸ್ಯೆಗಳ ಅಳಲು: ದೀರ್ಘಕಾಲದ ಜೈಲುವಾಸದಿಂದ ವೃತ್ತಿಜೀವನಕ್ಕೆ ತೊಂದರೆಯಾಗುತ್ತಿದೆ ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ ಬೆನ್ನು ನೋವಿನ ಸಮಸ್ಯೆ ಮತ್ತು ಜೈಲಿನಲ್ಲಿ ತಮಗೆ ಎದುರಾಗುತ್ತಿರುವ ಕಷ್ಟಗಳ ಬಗ್ಗೆಯೂ ಅರ್ಜಿಯಲ್ಲಿ ವಿವರಿಸಲಾಗಿದೆ. ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಸ್ಥಿತಿಗತಿ ಹಾಗೂ ವಿಚಾರಣೆಯ ಪ್ರಗತಿಯ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular