HomeKarnatakaಗ್ರಾಮೀಣ ಜನತೆ, ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉತ್ತಮ ಬಸ್ ವ್ಯವಸ್ಥೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ...

ಗ್ರಾಮೀಣ ಜನತೆ, ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಉತ್ತಮ ಬಸ್ ವ್ಯವಸ್ಥೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಬೆಳಗಾವಿ: ರಾಜ್ಯ ಸರ್ಕಾರದ ವತಿಯಿಂದ ಅನೇಕ ಜನಪರ‌‌ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದ ಜನರ ಜೀವನ‌ಮಟ್ಟ ಸುಧಾರಿಸುವ ಕಾರ್ಯವಾಗುತ್ತಿದೆ. ಚನ್ನಮ್ಮ‌ ಕಿತ್ತೂರಿನಲ್ಲಿ ಉದ್ಘಾಟನೆಗೊಂಡಂತಹ ಹೊಸ ಬಸ್ ಘಟಕದಿಂದ ಈ ಭಾಗದ ಗ್ರಾಮೀಣ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆಗೆ ಅನುಕೂಲವಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು.

ಚನ್ನಮ್ಮನ‌ ಕಿತ್ತೂರು ನೂತನ ಬಸ್ ಘಟಕದ ಆವರಣದಲ್ಲಿ ಸೋಮವಾರ ಚನ್ನಮ್ಮನ ‌ಕಿತ್ತೂರು ನೂತನ‌ ಬಸ್ ಘಟಕ‌ ಉದ್ಘಾಟಿಸಿ, ಹೊಸ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಚನ್ನಮ್ಮನ ಕಿತ್ತೂರಿನ‌ಲ್ಲಿ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾದಂತಹ ಸುಸಜ್ಜಿತ ನೂತನ ಬಸ್ ಘಟಕದಲ್ಲಿ ಪೆಟ್ರೋಲ್ ಬಂಕ್ ಸ್ಥಾಪಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಬಾರಿ ಸಾರಿಗೆ ಸಚಿವರಾಗಿದ್ದ ಸಮಯದಲ್ಲೂ‌ ಅನೇಕ‌ ಬಸ್ ನಿಲ್ದಾಣಗಳನ್ನು ‌ನಿರ್ಮಾಣ‌ ಮಾಡಲಾಗಿದೆ.  ನಮ್ಮ ಸರ್ಕಾರದ ಅವಧಿಯಲ್ಲಿ ಅನುಕಂಪದ‌ ಆಧಾರದ ಮೇಲೆ‌ ಹತ್ತು ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ 1200 ಹೊಸ ಬಸಗಳನ್ನು‌ ನೀಡಲಾಗಿದೆ. ಬೆಳಗಾವಿಯ ಕೇಂದ್ರ ಹಾಗೂ ನಗರ ಬಸ್ ನಿಲ್ದಾಣಗಳನ್ನು ಈಗಾಗಲೇ ಉದ್ಘಾಟಿಸಲಾಗಿದೆ. ಚನ್ನಮ್ಮ ಕಿತ್ತೂರಿನ ಹೊಸ ಬಸ್ ಘಟಕದಲ್ಲಿ‌ ಕಾಂಕ್ರೀಟ್ ಕಾಮಗಾರಿಯನ್ನು ಶೀಘ್ರವೇ ಕೈಗೊಳ್ಳಲಾಗುವುದು. ಹೊಸದಾಗಿ ನಿರ್ಮಾಣವಾದಂತಹ ಚನ್ನಮ್ಮನ ಕಿತ್ತೂರು ಬಸ್ ಘಟಕಕ್ಕೆ ಹದಿನೈದು ಹೊಸ ಬಸ್ ಗಳನ್ನು ನೀಡಲಾಗಿದೆ. ಈ ಬಸ್ ಗಳನ್ನು ಗ್ರಾಮೀಣ ಭಾಗದ ಜನರಿಗೆ ಹಾಗೂ ಮುಖ್ಯವಾಗಿ ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಸಚಿವ ರಾಮಲಿಂಗಾರೆಡ್ಡಿ ಅವರು ಸೂಚಿಸಿದರು

ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಮಾತನಾಡಿ, ಚನ್ನಮ್ಮನ ಕಿತ್ತೂರಿನಲ್ಲಿ ನೂತನ ಬಸ್ ಘಟಕ‌ ನಿರ್ಮಾಣದ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಚನ್ನಮ್ಮನ ಕಿತ್ತೂರು ಐತಿಹಾಸಿಕ ಸ್ಥಳವಾಗಿದ್ದು ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವುದು ಹಾಗೂ ಗ್ರಾಮೀಣ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದೊಂದಿಗೆ ಈ ಘಟಕ ಆರಂಭಿಸಲಾಗಿದೆ ಎಂದರು.

ಮುಂಚೆ ಈ ಭಾಗದ ಗ್ರಾಮೀಣ ವಿಧ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಹೋಗಲು ತುಂಬಾ ಅನಾನುಕೂಲವಾಗುತ್ತಿತ್ತು. ಇಂದು ಚನ್ನಮ್ಮನ ಕಿತ್ತೂರಿನ ಹೊಸ ಬಸ್ ಘಟಕಕ್ಕೆ ಹದಿನೈದು ಹೊಸ ಬಸ್ ಗಳನ್ನು ನೀಡಲಾಗಿದ್ದು, ಇದರಿಂದಾಗಿ ಈ ಭಾಗದ ಗ್ರಾಮೀಣ ಜನರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಉತ್ತಮ‌ ಸಾರಿಗೆ ವ್ಯವಸ್ಥೆ ನೀಡಲಾಗುವುದು ಎಂದರು.

ಚನ್ನಮ್ಮನ ಕಿತ್ತೂರು ಬಸ್ ನಿಲ್ದಾಣದಲ್ಲಿನ ಬಾಕಿ ಉಳಿದಿರುವ ಕಾಮಗಾರಿಗಳಿಗೆ ಅನುದಾನ ಹಾಗೂ ಈ ಭಾಗದಲ್ಲಿ ಸ್ಥಳೀಯವಾಗಿ ಸುಗಮ‌ ಸಂಚಾರಕ್ಕೆ ಹೊಸ ಮಿನಿ ಬಸ್ ಗಳನ್ನು‌ ಪೂರೈಸಲು ಸಾರಿಗೆ ಸಚಿವರಲ್ಲಿ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಮನವಿ ಮಾಡಿದರು.

ವಾ.ಕ.ರ.ಸಾ.ಸಂಸ್ಥೆ ಉಪಾಧ್ಯಕ್ಷರಾದ ಸುನೀಲ ಹನುಮಣ್ಣವರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ವಾಕರಸಾ ಸಂಸ್ಥೆ ವ್ಯವಸ್ಥಾಪಕ‌‌ ನಿರ್ದೇಶಕಿ ಪ್ರಿಯಾಂಕಾ ಎಂ.,ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಘಟಕ ವ್ಯವಸ್ಥಾಪಕರು, ಸಾರ್ವಜನಿಕರು ಸಿಬ್ಬಂದಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular