HomeIndiaಟಿವಿಕೆ ಭರ್ಜರಿ ಗೆಲುವು: ವಿಜಯ್ ಗೆ ಕರೆ ಮಾಡಿದ ರಾಹುಲ್ ಗಾಂಧಿ: ಟಿವಿಕೆಯೊಂದಿಗೆ ಕಾಂಗ್ರೆಸ್ ಮೈತ್ರಿ...

ಟಿವಿಕೆ ಭರ್ಜರಿ ಗೆಲುವು: ವಿಜಯ್ ಗೆ ಕರೆ ಮಾಡಿದ ರಾಹುಲ್ ಗಾಂಧಿ: ಟಿವಿಕೆಯೊಂದಿಗೆ ಕಾಂಗ್ರೆಸ್ ಮೈತ್ರಿ ಮುನ್ಸೂಚನೆ?

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ (ತಮಿಳಿಗ ವೆಟ್ರಿ ಕಳಗಂ) ಪಕ್ಷ ಶತಕ ದಾಟಿ ಸಾಧನೆ ಮಾಡಿದ್ದು, ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಟಿವಿಕೆ ಭರ್ಜರಿ ಗೆಲುವಿನ ಬೆನ್ನಲ್ಲೇ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಜಯ್ ಅವರಿಗೆ ಕರೆ ಮಾಡಿದ್ದಾರೆ.

ತಮಿಳುನಾಡಿನಲ್ಲಿ 108 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಟಿವಿಕೆ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆಯಾದರೂ ಸರ್ಕಾರ ರಚನೆಗೆ ಅಗತ್ಯವಿರುವ 118 ಸ್ಥಾನಗಳ ಮ್ಯಾಜಿಕ್ ಸಂಖ್ಯೆಗೆ ಇನ್ನೂ 10 ಸ್ಥಾನಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಟಿವಿಕೆ ಪಕ್ಷ ಸರ್ಕಾರ ರಚನೆ ಹಕ್ಕನ್ನು ಮಂಡಿಸಲು ಸಣ್ಣ ಪಕ್ಷಗಳ ಬೆಂಬಲವನ್ನು ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಿವಿಕೆ ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಈಗಾಗಲೇ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಮನವಿ ಸಲ್ಲಿಸಿದ್ದಾರೆ. ವಿಜಯ್ ಅವರು ರಾಜ್ಯಪಾಲರ ಭೇಟಿಗೆ ಸಮಯವನ್ನು ಕೇಳಿದ್ದಾರೆ.

ಟಿವಿಕೆ ಪಕ್ಷಕ್ಕೆ ಸರ್ಕಾರ ರಚನೆಗೆ ಇನ್ನೂ ಕೆಲ ಸ್ಥಾನಗಳ ಅಗತ್ಯವಿರುವುದರಿಂದ ವಿಜಯ್ ತಂದೆ ಎಸ್.ಎ.ಚಂದ್ರಶೇಖರ್ ಟಿವಿಕೆಯೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ಗೆ ಮನವಿ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಜಯ್‌ ಅವರಿಗೆ ಕರೆ ಮಾಡಿ ತಮಿಳುನಾಡಿನಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ರಾಅಹುಲ್ ಗಾಂಧಿಯವರ ಈ ಕರೆ ಟಿವಿಕೆ ಹಾಗೂ ಕಾಂಗ್ರೆಸ್ ಮೈತ್ರಿಯ ಹೊಸ ಸಾಧ್ಯತೆಗಳಿಗೆ ಮುನ್ಸೂಚನೆ ನೀಡಿದೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದಿದ್ದು, ಟಿವಿಕೆಗೆ ಬೆಂಬಲ ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ. ಪಿಎಂಕೆ ಕೂಡ 4 ಸ್ಥಾನಗಳಲ್ಲಿ ಗೆದ್ದಿದ್ದು, ಇವರ ಬೆಂಬಲವೂ ಸರ್ಕಾರ ರಚನೆಯಲ್ಲಿ ನಿರ್ಣಾಯಕವಾಗುವ ಸಾಧ್ಯತೆಗಳಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular