HomeUncategorizedಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನರು ಸಾವು ಪ್ರಕರಣ; ತನಿಖೆಗೆ ವಿಶೇಷ ತಂಡ ರಚಿಸಿದ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನರು ಸಾವು ಪ್ರಕರಣ; ತನಿಖೆಗೆ ವಿಶೇಷ ತಂಡ ರಚಿಸಿದ ಲೋಕಾಯುಕ್ತ

ಬೆಂಗಳೂರು: ಬಿರುಗಾಳಿ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ತನಿಖೆಗೆ ವಿಶೇಷ ತಂಡ ರಚನೆ ಮಾಡಿದೆ.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರುಶೀಲಿಸಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರು. ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖಾ ತಂಡದಲ್ಲಿ ಪೊಲೀಸ್ ಅಧೀಕ್ಷಕ ದರ್ಜೆಯ ಅಧಿಕಾರಿಯನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ತಂಡದಲ್ಲಿ ಓರ್ವ ಜಿಲ್ಲಾ ನ್ಯಾಯಾಧೀಶರು, ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯ ಇಂಜಿನಿಯರ್ ಕೂಡ ಇರಲಿದ್ದಾರೆ.

ಪ್ರಕರಣದ ತನಿಖೆ ನಡೆಸಿ ಇದೇ ತಿಂಗಳ 16ರ ಒಳಗೆ ವರದಿ ನೀಡಲು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಆದೇಶಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತನಿಖಾ ತಂಡದ ಸಭೆ ನಡೆಸಲಾಗಿದೆ. ಸಭೆಯಲ್ಲಿ ಯಾರಿಗೆಲ್ಲ ನೋಟಿಸ್ ಕೊಟ್ಟು ವಿಚಾರಣೆ ನಡೆಸಬೇಕು ಎಂದು ಚರ್ಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular