HomeKarnatakaಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ನೀಡಲು ಭೂ ಮಾಲೀಕರಿಂದ ಅರ್ಜಿ ಆಹ್ವಾನ

ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ನೀಡಲು ಭೂ ಮಾಲೀಕರಿಂದ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಕಚೇರಿ ವತಿಯಿಂದ ‘ಭೂ ಒಡೆತನ ಯೋಜನೆ’ಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನಿನ ಸೌಲಭ್ಯ ಕಲ್ಪಿಸಲು ಇತರ ಜನಾಂಗದವರಿಂದ ಜಮೀನನ್ನು ಖರೀದಿಸಲು ಉದ್ದೇಶಿಸಲಾಗಿದ್ದು, ಆಸಕ್ತ ಭೂ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜಮೀನನ್ನು ಹೊರತುಪಡಿಸಿ, ಇತರ ಜನಾಂಗದವರಿಂದ ಮಾತ್ರ ಜಮೀನನ್ನು ಖರೀದಿಸಲಾಗುತ್ತದೆ. ಜಮೀನು ನೀಡಲು ಆಸಕ್ತಿ ಇರುವ ಮಾಲೀಕರು ನಿಗಮಕ್ಕೆ ಒಪ್ಪಿಗೆ ಪತ್ರವನ್ನು ಸಲ್ಲಿಸಬಹುದಾಗಿದೆ.

ಆಸಕ್ತ ಭೂ ಮಾಲೀಕರು ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆಂಟ್ ಪ್ರದೇಶದ ನಂದಿ ಕಾಲೋನಿಯ 1ನೇ ಕ್ರಾಸ್ ನ ನಂದಿ ಶಾಲೆ ಹಿಂಭಾಗದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-245551, ಮೊ.9886618721 ಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೈಮಗ್ಗ ಮತ್ತು ಜವಳಿ ಇಲಾಖೆ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ : 2026-27ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಕೈಮಗ್ಗ ಉದ್ಯಮಿಗಳಿಗೆ ಸಹಾಯಧನ ಯೋಜನೆಯಡಿಯಲ್ಲಿ ಧಾರವಾಡ ಜಿಲ್ಲೆಯ ನೋಂದಾಯಿತ ಕಾರ್ಯನಿರತ ಕೈಮಗ್ಗ ನೇಕಾರ ಸಹಕಾರ ಸಂಘಗಳು, ಸಂಘದ ಉತ್ಪಾದನಾ ಚಟುವಟಿಕೆ ಹೆಚ್ಚಿಸಿಕೊಳ್ಳಲು, ಸಂಘಕ್ಕೆ ಸುಧಾರಿತ ಕೈಮಗ್ಗಗಳ ಖರೀದಿ ಮತ್ತು ದುಡಿಮೆ ಬಂಡವಾಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕೈಮಗ್ಗ ನೇಕಾರ ಸಹಕಾರ ಸಂಘಗಳು ಮೇ 15, 2026 ರೊಳಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ (ಪ್ರಸ್ತಾವನೆ) ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:0836-2448834 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular