HomeIndiaBREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದ ಮಮತಾ ಬ್ಯಾನರ್ಜಿ

BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ಪಕ್ಷ ಹೀನಾಯವಾಗಿ ಸೋಲನುಭವಿಸಿದ್ದರೂ, ಸೋಲನ್ನು ಒಪ್ಪಿಕೊಳ್ಳದ ಮಮತಾ ಬ್ಯಾನರ್ಜಿ, ಚುನಾವಣೆಯಲ್ಲಿ ನೈತಿಕವಾಗಿ ನಾವೇ ಗೆದ್ದಿದ್ದೇವೆ. ನಾನು ಯಾವ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ನಿಸ್ಪಕ್ಷಪಾತವಾಗಿ ಚುನಾವಣೆ ನಡೆದಿಲ್ಲ. ಬಿಜೆಪಿ ಹಾಗೂ ಚುನಾವಣಾ ಆಯೋಗ ಕುತಂತ್ರವಾಗಿ ಚುಅನವಣೆ ನಡೆಸಿದ್ದಾರೆ. ಚುನಾವಣಾ ಆಯೋಗ ಮಾರಾಟವಾಗಿದೆ. ವಾಮಮಾರ್ಗದ ಮೂಲಕ ಬಿಜೆಪಿ ಗೆಲುವು ಪಡೆದಿದೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಿಎಂಸಿ ಸೋಲನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ನಡೆದಿದೆ. ನೂರು ಸ್ಥಾನಗಳಲ್ಲಿ ನಮ್ಮಿಂದ ಕಿತ್ತುಕೊಳ್ಳಲಾಗಿದೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ನನ್ನ ಬಳಿಯೂ ರಾಜಕೀಯ ಸ್ಟ್ರಾಟಜಿ ಇದೆ. ಅದೇನೆಂಬುದನ್ನು ಈಗ ನಾನು ಬಹಿರಂಗಪಡಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಸಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 293 ವಿಧಾನಸಭಾ ಕ್ಷೇತ್ರಗಳ ಪೈಕಿ ಟಿಎಂಸಿ 80 ಸ್ಥಾನಗಳಲ್ಲಿ ಗೆಲುವು ಪಡೆದಿದ್ದರೆ, ಬಿಜೆಪಿ 207 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಬಿಜೆಪಿ ನೂತನ ಸಿಎಂ ಪ್ರಮಾಣವಚನ ಸ್ವೀಕಾರಕ್ಕೆ ಡೇಟ್ ಫಿಕ್ಸ್: ಮೇ.9 ರಂದು ಬಿಜೆಪಿ ಸರ್ಕಾರ ಅಧಿಕಾರಕ್ಕೆ:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಡಬಲ್ ಸೆಂಚೂರಿ ಸಾಧನೆ ಮಾಡಿರುವ ಬಿಜೆಪಿ ಇದೇ ಮೊದಲ ಬಾರಿ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ. ಬಂಗಾಳ ಚುನಾವಣೆಯಲ್ಲಿ 206 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ ಮೊದಲ ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್ ಮಾಡಿದ್ದು, ನೂತನ ಮುಖ್ಯಮಂತ್ರಿ ಪ್ರಮಾಣವಚನ ದಿನಾಂಕವನ್ನು ಘೋಷಿಸಿದೆ.

ಬಿಜೆಪಿಯ ಅಭೂತಪೂರ್ವ ಗೆಲುವಿನೊಂದಿಗೆ ಬಂಗಾಳದಲ್ಲಿ ಕೇಸರಿ ಯುಗಾರಂಭವಾಗಲಿದ್ದು, 15 ವರ್ಷಗಳ ದೀದಿ ಮಮತಾ ಬ್ಯಾಅನರ್ಜಿ ಅವರ ಆಳ್ವೆಕೆ ಅಂತ್ಯವಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಮೇ 9 ರಂದು ಬಿಜೆಪಿಯ ಮೊದಲ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಅಂದು ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದ್ದು, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ. ಅಂದೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ನಡೆಯಲಿದ್ದು, ಎನ್‌ಡಿಎ ಆಡಳಿತವಿರುವ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 207 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದೊಂದು ಐತಿಹಾಸಿಕ ಗೆಲುವು. ಈ ಜನಾದೇಶವು ಜನರ ಬದಲಾವಣೆ ಮತ್ತು ಭಯದಿಂದ ಮುಕ್ತ ಭವಿಷ್ಯದ ಬಯಕೆಯನ್ನು ಪ್ರತಿಬಿಂಬಿಸುತ್ತದೆ. ಈ. ಫಲಿತಾಂಶದ ಹಿಂದೆ ಮಹಿಳಾ ಮತದಾರರ ನಿರ್ಣಾಯಕ ಶಕ್ತಿಯಿದೆ. ಜೊತೆಗೆ ರಾಜಕೀಯ ಹಿಂಸಾಚಾರವನ್ನು ಕೊನೆಗಾಣಿಸಲು ಜನರು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular