ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುತ್ತಿದ್ದ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸೆಸ್ಕಾಂ ನುರನಕ್ಕಿ ಶಾಖೆಯ ಜೂನಿಯರ್ ಇಂಜಿನಿಯರ್ ದೇವರಾಜು ಲೋಕಾಯುಕ್ತ ಬಲೆಗೆ ಬಿದ್ದವರು. ಶಶಾಂಕ್ ಎಂಬುವವರ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ನೀಡಲು 5,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣದ ಸಮೇತ ದೇವರಾಜ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪಾ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ದೇವರಾಜು ಅವರ ವಿಚಾರಣೆ ನಡೆಸಲಾಗಿದೆ.

