HomeKarnatakaಮೇ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ: ಆರ್ಟ್ ಆಫ್ ಲಿವಿಂಗ್ 45ನೇ ವರ್ಷಾಚರಣೆಯಲ್ಲಿ ಭಾಗಿ

ಮೇ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ: ಆರ್ಟ್ ಆಫ್ ಲಿವಿಂಗ್ 45ನೇ ವರ್ಷಾಚರಣೆಯಲ್ಲಿ ಭಾಗಿ

ಬೆಂಗಳೂರು: ಆರ್ಟ್ ಆಫ್ ಲಿವಿಂಗ್ ನ 45ನೇ ವರ್ಷಾಚರಣೆ ಮತ್ತು ರವಿಶಂಕರ್ ಗುರೂಜಿಯವರ 70ನೇ ವರ್ಷದ ಹುಟ್ಟುಹಬ್ಬ ಆಚರಣೆ ಮೇ 10ರಂದು ನಡೆಯಲಿದೆ.

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಇದೇ ವೇಳೆ ಆಶ್ರಮದ ಆವರಣದಲ್ಲಿ ನಿರ್ಮಾಣವಾಗಿರುವ ನೂತನ ಧ್ಯಾನ ಮಂದಿರ ಉದ್ಘಾಟಸಲಿದ್ದಾರೆ.

ಧ್ಯಾನಮಂದಿರ ಅನಾವರಣ ಜೊತೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾಗಿರುವ ಆರ್ಟ್ ಆಫ್ ಲಿವಿಂಗ್ ಮಾನಸಿಕ, ಆಧ್ಯಾತ್ಮಿಕ ಸಾಧನೆಗಳ ಮೂಲಕ ಜನರಿಗೆ ಮಾರ್ಗದರ್ಶನ ನೀಡುತ್ತಾ ಬಂದಿದ್ದು, 45 ವರ್ಷ ಪೂರೈಸಿದೆ. ಮೇ 10 ರಿಂದ 25 ರವರೆಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ತಿಂಗಳು ಪ್ರಧಾನಿ ಮೋದಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಈ ತಿಂಗಳು ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular