ಶಿವಮೊಗ್ಗ: ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು ಎಡದಂಡೆ ಕಾಲುವೆಗಳಲ್ಲಿ ನೀರು ಹರಿಸುವುದನ್ನು ಮೇ 17ರವರೆಗೆ ಮುಂದುವರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

