HomeKarnatakaಸಹೋದರನ ಆರೈಕೆಗೆ ಆಸ್ಪತ್ರೆಯಲ್ಲಿದ್ದ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ

ಸಹೋದರನ ಆರೈಕೆಗೆ ಆಸ್ಪತ್ರೆಯಲ್ಲಿದ್ದ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ

ಬಾಗಲಕೋಟೆ: ಸಹೋದರನ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದ ಮಹಿಳೆಯ ಮೇಲೆ ಹೊರಗುತ್ತಿಗೆ ನೌಕರ ಅತ್ಯಾಚಾರ ಎಸಗಿದ ಘಟನೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಆರೋಪಿ ಫರೀದ್ ಸಾಬ್ ಡಾಂಗೆ ಆಸ್ಪತ್ರೆಯಲ್ಲಿ ಗುತ್ತಿಗೆ ನೌಕರನಾಗಿದ್ದು, ಅಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯ 34 ವರ್ಷದ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅನಾರೋಗ್ಯ ಪೀಡಿತ ಸಹೋದರನ ಆರೈಕೆಗಾಗಿ ಸಂತ್ರಸ್ತೆ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿದ್ದರು. ಮಹಿಳೆಯನ್ನು ಪರಿಚಯಿಸಿಕೊಂಡ ಫರೀದ್ ಸಾಬ್ ಮೇ 4ರ ತಡರಾತ್ರಿ 12ರಿಂದ 2 ಗಂಟೆಯ ವೇಳೆಗೆ ಆಕೆಗೆ ಬೆದರಿಕೆ ಹಾಕಿ ಬಾತ್ರೂಮ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ.

ನಂತರ ಮಹಿಳೆಯನ್ನು ಒಳಗೆ ಲಾಕ್ ಮಾಡಿ ಕೆಲಸಕ್ಕೆ ಹೋಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿಯನ್ನು ತರಾಟೆಗೆ ತೆಗೆದುಕೊಂಡ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಮಹೇಶ್ ಕೋಣಿ ಅವರು ಆರೋಪಿಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular