HomeIndiaBREAKING: ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ; ಐವರು ಬಿಜೆಪಿ ಕಾರ್ಯಕರ್ತರಿಗೆ...

BREAKING: ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ; ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಬಿಜೆಪಿ ಸಿಎಂ ಅಭ್ಯರ್ಥಿ ಸುವೆಂದು ಅಧಿಕಾರಿ ಪಿಎ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬೆನ್ನಲ್ಲೇ ಹಲವೆಡೆ ಹಿಂಸಾಚಾರ ತೀವ್ರಗೊಳ್ಳುತ್ತಿದೆ.

ಬಿಜೆಪಿ ಶಾಸಕಿ ರತ್ನ ದೇಬನಾಥ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾನಿಹಾಟಿ ಕ್ಷೇತ್ರದ ಬಿಜೆಪಿ ನೂತನ ಶಾಸಕಿಯಾಗಿರುವ ರತ್ನ ದೇಬನಾಥ್ ಅವರ ಮನೆ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬೀಡು ಬಿಟ್ಟಿದ್ದಾರೆ. ಶಾಸಕಿ ನಿವಾಸ ಹಾಗೂ ಸುತ್ತಮುತ್ತ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular