HomeIndiaBIG NEWS: ಕೇರಳ ಸಿಎಂ ಪಟ್ಟಕ್ಕಾಗಿ ಮೂರು ನಾಯಕರ ನಡುವೆ ತೀವ್ರ ಪೈಪೋಟಿ: ಎಐಸಿಸಿ ವೀಕ್ಷಕರಿಂದ...

BIG NEWS: ಕೇರಳ ಸಿಎಂ ಪಟ್ಟಕ್ಕಾಗಿ ಮೂರು ನಾಯಕರ ನಡುವೆ ತೀವ್ರ ಪೈಪೋಟಿ: ಎಐಸಿಸಿ ವೀಕ್ಷಕರಿಂದ ಶಾಸಕರ ಅಭಿಪ್ರಾಯ ಸಂಗ್ರಹ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಯುಡಿಎಫ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆಗಳು ಜೋರಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನ ಮೂವರು ನಯಕ ನಡುವೆ ತೀವ್ರ ಪೈಪೋಟಿ ನಡೆದಿದೆ.

ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತಲ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಮೂವರ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, ಸಿಎಂ ಪಟ್ತ ಯಾರಿಗೆ ಒಲಿಯಲಿದೆ? ಎಂಬುದೇ ಕುತೂಹಲವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂವರು ನಾಯಕರ ಪೈಪೋಟಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ಈ ಪ್ರಕ್ರಿಯೆಗಾಗಿ ಎಐಸಿಸಿ ವೀಕ್ಷಕರಾದ ಮುಕುಲ್ ವಾಸನಿಕ್ ಮತ್ತು ಅಜಯ್ ಮಾಕೇನ್ ಅವರು ಕೇರಳದ ತಿರುವನಂತಪುರಂನ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. 63 ಕಾಂಗ್ರೆಸ್ ಶಾಸಕರಿಂದ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.

ಆರಂಭಿಕ ಮಾಹಿತಿಗಳ ಪ್ರಕಾರ, ಕೆ.ಸಿ. ವೇಣುಗೋಪಾಲ್ ಅವರಿಗೆ 47 ಶಾಸಕರ, ವಿ.ಡಿ. ಸತೀಶನ್ ಅವರಿಗೆ 35 ಶಾಸಕರ ಮತ್ತು ರಮೇಶ್ ಚೆನ್ನಿತಲ ಅವರಿಗೆ 16 ಶಾಸಕರ ಬೆಂಬಲವಿದೆ ಎಂದು ತಿಳಿದುಬಂದಿದೆ. ಈ ವರದಿಗಳನ್ನು ಆಧರಿಸಿ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಮೇ 10ರೊಳಗೆ ಕೇರಳದಲ್ಲಿ ಹೊಸ ಕಾಂಗ್ರೆಸ್ ಮುಖ್ಯಮಂತ್ರಿ ಅಧಿಕಾರ ಸ್ವೀಕಾರಿಸಲಿದದರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular