HomeIndiaಪಂಚರಾಜ್ಯಗಳ ವಿಧಾನಸಭಾ ಚುನಾವಣೆ: 1,400 ಕೋಟಿಗೂ ಅಧಿಕ ಅಕ್ರಮ ಹಣ ಜಪ್ತಿ

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ: 1,400 ಕೋಟಿಗೂ ಅಧಿಕ ಅಕ್ರಮ ಹಣ ಜಪ್ತಿ

ನವದೆಹಲಿ: 2026ರ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ 1400 ಕೋಟಿಗೂ ಅಧಿಕ ಆಕ್ರಮ ಹಣ ಜಪ್ತಿ ಮಾಡಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ಅಧಿಕೃತ ಮಾಹಿತಿ ನೀಡಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗ ಒಟ್ಟು 1,400 ಕೋಟಿ ರೂಪಾಅಯಿಗೂ ಹೆಚ್ಚು ಮೌಲ್ಯದ ಅಕ್ರಮ ಹಣವನ್ನು ವಶಪಡಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಯೋಗ ತಿಳಿಸಿದೆ.

ಈ ಅಕ್ರಮ ವಸ್ತುಗಳಲ್ಲಿ 154.89 ಕೋಟಿ ನಗದು, 183.3 ಕೋಟಿ ಮೌಲ್ಯದ 69.8 ಲಕ್ಷ ಲೀಟರ್ ಮದ್ಯ, 337.8 ಕೋಟಿ ಮೌಲ್ಯದ ಮಾದಕ ದ್ರವ್ಯ, 250 ಕೋಟಿ ಮೌಲ್ಯದ ಅಮೂಲ್ಯವಾದ ಲೋಹ ಮತ್ತು 518 ಕೋಟಿ ಮೌಲ್ಯದ ಉಚಿತ ವಸ್ತುಗಳು ಸೇರಿವೆ ಎಂದು ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕಟಣೆಯ ಪ್ರಕಾರ, 2021ರ ಚುನಾವಣೆಗಳಿಗೆ ಹೋಲಿಸಿದರೆ ಪಶ್ಚಿಮ ಬಂಗಾಳದಲ್ಲಿ ಶೇ. 68.92ರಷ್ಟು ಅತಿ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಪ್ರಕ್ರಿಯೆಯ ಸಮಯದಲ್ಲಿ ಮುಖ್ಯ ಕಾರ್ಯದರ್ಶಿಗಳು, ಮುಖ್ಯ ಚುನಾವಣಾ ಅಧಿಕಾರಿಗಳು (CEO), ಪೊಲೀಸ್ ಮಹಾನಿರ್ದೇಶಕರು (DGP) ಮತ್ತು ಚುನಾವಣೆ ನಡೆಯಲಿರುವ ರಾಜ್ಯಗಳ ಹಾಗೂ ನೆರೆಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳೊಂದಿಗೆ ಹಲವು ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular