HomeKarnatakaತಮಿಳುನಾಡು ರಾಜ್ಯಪಾಲರ ನಡೆ ಸರಿಯಲ್ಲ; ರಾಜ್ಯದ ಜನರ ಭಾವನೆಗೆ ಬೆಲೆ ಕೊಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ತಮಿಳುನಾಡು ರಾಜ್ಯಪಾಲರ ನಡೆ ಸರಿಯಲ್ಲ; ರಾಜ್ಯದ ಜನರ ಭಾವನೆಗೆ ಬೆಲೆ ಕೊಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು: ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ ಎಂದು ಡಿಸಿಎಂ ಡಿ.ಕೆ‌.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಟಿವಿಕೆ ಪಕ್ಷಕ್ಕೆ ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಬೇಕು. ಕರ್ನಾಟಕದಲ್ಲಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಹೆಚ್ಚು ಸ್ಥಾನ ಗಳಿಸಿದ ಪಕ್ಷಗಳಿಗೆ ಸರ್ಕಾರ ರಚಿಸಲು ಈ ಹಿಂದೆಯೂ ಅನುಮತಿ ನೀಡಲಾಗಿತ್ತು.‌ ರಾಷ್ಟ್ರಪತಿಗಳಾಗಿದ್ದ ನಾರಾಯಣನ್, ಅಬ್ದುಲ್ ಕಲಾಂ ಅವರೂ ಈ ರೀತಿ ಮಾಡಿದ್ದರು. ವಾಜಪೇಯಿ ಅವರಿಗೂ ಸಹ ಇದೇ ರೀತಿ ಸರ್ಕಾರ ರಚಿಸಲು ಅನುಮತಿ ನೀಡಿ ಸದನದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಟಿವಿಕೆಗೆ ಅವಕಾಶ ನೀಡದಿರುವುದು ತಪ್ಪು ಎಂದರು.

ಮೊದಲು ಬಹುಮತ ಸಾಬೀತಿಗೆ ಅವಕಾಶ ನೀಡಬೇಕು. ಒಂದು ರಾಜ್ಯದ ಜನರ ಭಾವನೆಗಳಿಗೆ ಬೆಲೆ ಕೊಡಬೇಕು. ಇದು ಪ್ರಜಾಪ್ರಭುತ್ವ. ಒಂದು ಮತದಿಂದ ಬಹುಮತ ಬರಬಹುದು ಅಥವಾ ಕಳೆದುಕೊಳ್ಳಬಹುದು‌. ವಾಜಪೇಯಿ ಅವರಿಗೆ ಇದೇ ರೀತಿ ಆಗಲಿಲ್ಲವೇ? ಒಂದೊಮ್ಮೆ ಬಹುಮತ ಸಾಬೀತು ಆಗದೇ ಹೋದರೆ ಮುಂದಿನ ಆಯ್ಕೆ ನೋಡಬಹುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ಪಾಲಿಕೆ ಕಚೇರಿ: ಸ್ಥಳ ಪರಿಶೀಲನೆ ನಂತರ ತೀರ್ಮಾನ

ಇದೇ ವೇಳೆ ಬೆಂಗಳೂರು ಉತ್ತರ ಪಾಲಿಕೆಯ ಹೊಸ ಕಚೇರಿ ನಿರ್ಮಾಣ ಮಾಡಬೇಕು ಎಂದು ಮೂರು- ನಾಲ್ಕು ಸ್ಥಳಗಳ ಪ್ರಸ್ತಾವನೆಯಿದೆ. ಸ್ಥಳ ಪರಿಶೀಲನೆ ಮಾಡಿ ನಿರ್ಧಾರ ಮಾಡಬೇಕಿದೆ. ಇದರ ಬಗ್ಗೆ ಮಂತ್ರಿಗಳು, ಶಾಸಕರು ತಮ್ಮದೇ ಆದ ಅಭಿಪ್ರಾಯ ನೀಡಿದ್ದಾರೆ. ಸ್ಥಳ ಪರಿಶೀಲನೆ ನಂತರ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular