HomeKarnatakaGOOD NEWS: ಬಾಪೂಜಿ ಸೇವಾಕೇಂದ್ರದಲ್ಲಿಯೂ ಇ-ಸ್ವತ್ತು ಅರ್ಜಿ ಸಲ್ಲಿಕೆ: ಉಚಿತವಾಗಿ ನಮೂನೆ 11ಎ, 11ಬಿ ಪಡೆಯಲು...

GOOD NEWS: ಬಾಪೂಜಿ ಸೇವಾಕೇಂದ್ರದಲ್ಲಿಯೂ ಇ-ಸ್ವತ್ತು ಅರ್ಜಿ ಸಲ್ಲಿಕೆ: ಉಚಿತವಾಗಿ ನಮೂನೆ 11ಎ, 11ಬಿ ಪಡೆಯಲು ಅವಕಾಶ

ಗ್ರಾಮೀಣ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ತರಲು, ಅಕ್ರಮ ತಡೆಗೆ ಮತ್ತು ಅಧಿಕೃತ ಮಾಲೀಕತ್ವದ ದಾಖಲೆ ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಇ-ಸ್ವತ್ತು ತಂತ್ರಾಂಶ 2.0 ರಲ್ಲಿ ಪ್ರಾರಂಭದಲ್ಲಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಜನರು ತಮ್ಮ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಡಿಜಿಟಲ್ ಪ್ರಮಾಣ ಪತ್ರವನ್ನು ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ಇನ್ನು ನಿಮ್ಮ ಹತ್ತಿರದ ಬಾಪೂಜಿ ಸೇವಾಕೇಂದ್ರದಲ್ಲಿಯೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದಾಗಿದೆ. ಈ ಸೇವಾಕೇಂದ್ರದಲ್ಲಿ ಉಚಿತವಾಗಿ ನಮೂನೆ 11ಎ ಮತ್ತು ನಮೂನೆ 11ಬಿಗಳನ್ನು ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇನ್ನು ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಸೇವಾ ಕೇಂದ್ರಗಳಲ್ಲಿ ಅರ್ಜಿ ಶುಲ್ಕ ನಿಗದಿಪಡಿಸಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಈ ಮೂಲಕ ವಿನಂತಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳಿದ್ದರೆ, ಇ-ಸ್ವತ್ತು ಸಹಾಯವಾಣಿ ಸಂಖ್ಯೆ 94834 76000 ಕರೆ ಮಾಡಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular