HomeLatest NewsBREAKING: ಬಿಜೆಪಿ ಹಿರಿಯ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಕಾಲಿಗೆ ನಮಸ್ಕರಿಸಿದ ಪ್ರಧಾನಿ ಮೋದಿ|makhanlal sarkar

BREAKING: ಬಿಜೆಪಿ ಹಿರಿಯ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಕಾಲಿಗೆ ನಮಸ್ಕರಿಸಿದ ಪ್ರಧಾನಿ ಮೋದಿ|makhanlal sarkar

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಬಿಜೆಪಿ ಸರ್ಕಾರದ ಆಡಳಿತ ಆರಂಭವಾಗಿದೆ. ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರ ಕಾಲಿಗೆ ನಮಸ್ಕರಿಸಿದ ಘಟನೆ ನಡೆದಿದೆ.

ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಐತಿಹಾಸಿಕ ಸಮಾರಂಭದಲ್ಲಿ ಇಂದು ಪಶ್ಚಿಮ ಬಂಗಾಳ ನೂತನ ಮುಖ್ಯಮಂತ್ರಿ ಹಾಗೂ ಐವರು ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಗಣ್ಯಾತಿಗಣ್ಯರು ವೇದಿಕೆಯಲ್ಲಿ ನೆರೆದಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಹಿರಿಯ ಬಿಜೆಪಿ ಕಾರ್ಯಕರ್ತ 98 ವರ್ಷದ ಮುಖನ್ ಲಾಲ್ ಸರ್ಕಾರ್ ಅವರ ಕಾಲಿಗೆ ನಮಸ್ಕರಿಸಿ ಅವರ ಯೋಗಕ್ಷೇಮ ವಿಚಾರಿಸಿದರು.

ಪ್ರಮಾಣವಚನ ಸಮಾರಂಭದ ವೇದಿಕೆಯ ಮೇಲೆ ಮುಖನ್ ಲಾಲ್ ಸರ್ಕಾರ್ ಆಗಮಿಸುತ್ತಿದ್ದಂತೆಯೇ ಸ್ವತಃ ಪ್ರಧಾನಿ ಮೋದಿಯವರು ಅವರ ಬಳಿ ತೆರಳಿ ಉಭಯಕುಶಲೋಪರಿ ವಿಚಾರಿಸಿ ಸರ್ಕಾರ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಬಳಿಕ ಅವರನ್ನು ಆಲಂಗಿಸಿ ಗೌರವಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖನ್ ಲಾಲ್ ಸರ್ಕಾರ್ ಅವರು ಶ್ಯಾಮಪ್ರಸಾದ್ ಮುಖರ್ಜಿ ಜೊತೆ ಕೆಲಸ ಮಾಡಿವರು. 1952ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಮುಖನ್ ಲಾಲ್ ಸರ್ಕಾರ್ ಬಂಧನಕ್ಕೀಡಾಗಿದ್ದರು. ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗೂ ಮಖನ್ ಲಾಲ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದರು. 1980ರಲ್ಲಿ 10 ಸಾವಿರ ಜನರನ್ನು ಮಖನ್ ಲಾಲ್ ಸರ್ಕಾರ್ ಬಿಜೆಪಿಗೆ ಸೇರಿಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular