HomeKarnatakaಕೈದಿಗಳಿಗೂ ಬಯೋಮೆಟ್ರಿಕ್ ವ್ಯವಸ್ಥೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜಾರಿ

ಕೈದಿಗಳಿಗೂ ಬಯೋಮೆಟ್ರಿಕ್ ವ್ಯವಸ್ಥೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜಾರಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೂ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.

2.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆಯನ್ನು ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಸೇವಾ ಇಲಾಖೆ ಜಾರಿ ಮಾಡಿದೆ. ಈಗಾಗಲೇ ಕಾರಾಗೃಹದ ಭದ್ರತೆಗೆ ಕೃತಕ ಬುದ್ಧಿಮತ್ತೆ(ಎಐ) ಮತ್ತು ಸಂದರ್ಶಕರಿಗೆ ಡಿಜಿಟಲ್ ಟೋಕನ್ ನಂತರ ಈಗ ಅಕ್ರಮ ಚಟುವಟಿಕೆಗಳನ್ನು ತಡೆಯಲು ಮತ್ತೊಂದು ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಕಾರಾಗೃಹದಲ್ಲಿ ಕೈದಿಗಳ ಹಾಜರಾತಿಗೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಸಂದರ್ಶಕರ ಕೊಠಡಿ, ಆಸ್ಪತ್ರೆ, ಕ್ಯಾಂಟೀನ್, ಗ್ರಂಥಾಲಯ, ಮೈದಾನ, ಅಡುಗೆ ಕೊಣೆ, ಬೇಕರಿ ಸೇರಿದಂತೆ ಇತರೆಡೆ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ಆ ಪ್ರದೇಶಗಳ ಪ್ರವೇಶ ಮತ್ತು ನಿರ್ಗಮನದ ವೇಳೆ ಸಜಾ ಬಂಧಿಗಳು, ವಿಚಾರಣಾಧೀನ ಕೈದಿಗಳು ಬಯೋಮೆಟ್ರಿಕ್ ಬಳಸಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular