HomeIndiaವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಗಿ: 9 ಸಚಿವರ ನೇಮಕಕ್ಕೆ ರಾಜ್ಯಪಾಲರ ಅನುಮೋದನೆ

ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಗಿ: 9 ಸಚಿವರ ನೇಮಕಕ್ಕೆ ರಾಜ್ಯಪಾಲರ ಅನುಮೋದನೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಲೋಕಸಭಾ ವಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ.

ಬೆಳಗ್ಗೆ ದೆಹಲಿಯಿಂದ ಹೊರಟು ಚೆನ್ನೈಗೆ ಆಗಮಿಸಿದ ರಾಹುಲ್ ಗಾಂಧಿ ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣಕ್ಕೆ ಆಗಮಿಸಿದರು.

ಟಿವಿಕೆ ಮುಖ್ಯಸ್ಥ ಸಿ ಜೋಸೆಫ್ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಅಭಿನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

9 ಸಚಿವರ ನೇಮಕಕ್ಕೆ ರಾಜ್ಯಪಾಲರು ಅನುಮೋದನೆ

ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥರಾಗಿರುವ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಇಲ್ಲಿನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಬೋಧಿಸಲಿದ್ದಾರೆ.

ಎಐಎಡಿಎಂಕೆ ಮತ್ತು ಡಿಎಂಕೆಯ ಸಾಂಪ್ರದಾಯಿಕ ಪ್ರಾಬಲ್ಯವನ್ನು ಮುರಿದು ರಾಜ್ಯದಲ್ಲಿ ಸರ್ಕಾರ ರಚಿಸಿದ ಮೊದಲ ದ್ರಾವಿಡೇತರ ಪಕ್ಷ ಇದಾಗಿದೆ.

ಏತನ್ಮಧ್ಯೆ, 9 ಸಚಿವರ ನೇಮಕಕ್ಕೆ ಮುಖ್ಯಮಂತ್ರಿಯಾಗಿ ನಿಯೋಜಿತ ವಿಜಯ್ ಅವರ ಶಿಫಾರಸನ್ನು ಅರ್ಲೇಕರ್ ಅನುಮೋದಿಸಿದ್ದಾರೆ ಎಂದು ಲೋಕಭವನ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಸಚಿವ ಸಂಪುಟವು ಮಹಿಳಾ ಸಚಿವೆ ಎಸ್ ಕೀರ್ತನಾ ಅವರನ್ನು ಒಳಗೊಂಡಿದೆ.

“ಮುಖ್ಯಮಂತ್ರಿಯಾಗಿ ನಿಯೋಜಿತರಾದ ಸಿ ಜೋಸೆಫ್ ವಿಜಯ್ ಮೇ 9 ರಂದು ಸಚಿವರಾಗಿ ನೇಮಕಗೊಳ್ಳಲು ಒಂಬತ್ತು ಜನರ ಪಟ್ಟಿಯನ್ನು ಶಿಫಾರಸು ಮಾಡಿದ್ದಾರೆ. ಸಚಿವರ ನೇಮಕಕ್ಕೆ ಸಂಬಂಧಿಸಿದ ಶಿಫಾರಸನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ” ಎಂದು ಪ್ರಕಟಣೆ ತಿಳಿಸಿದೆ.

‘ಬಸ್ಸಿ’ ಎನ್ ಆನಂದ್, ಆಧವ್ ಅರ್ಜುನ, ಕೆ ಎ ಸೆಂಗೋಟ್ಟೈಯನ್, ಕೆ ಜಿ ಅರುಣ್‌ರಾಜ್, ಪಿ ವೆಂಕಟರಮಣನ್, ಸಿ ಟಿ ಆರ್ ನಿರ್ಮಲ್ ಕುಮಾರ್, ಎ ರಾಜಮೋಹನ್, ಕೀರ್ತನಾ ಮತ್ತು ಕೆ ಟಿ ಪ್ರಭು ಸೇರಿದಂತೆ ವಿಜಯ್ ಅವರ ಹೊಸ ಸಚಿವ ಸಂಪುಟಕ್ಕೆ ಅರ್ಲೇಕರ್ ಪ್ರಮಾಣ ವಚನ ಬೋಧಿಸುವ ನಿರೀಕ್ಷೆಯಿದೆ.

ಮೇ 13 ರಂದು ಅಥವಾ ಅದಕ್ಕೂ ಮೊದಲು ವಿಶ್ವಾಸ ಮತದ ಮೂಲಕ ವಿಜಯ್ ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಸಾಬೀತುಪಡಿಸುವ ನಿರೀಕ್ಷೆಯಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular