HomeKarnatakaಸಚಿವ ಡಿ. ಸುಧಾಕರ್ ಅಂತಿಮ ದರ್ಶನ ಪಡೆದ ಎಂ.ಬಿ. ಪಾಟೀಲ್: ಕುಟುಂಬ ಸದಸ್ಯರಿಗೆ ಸಾಂತ್ವನ

ಸಚಿವ ಡಿ. ಸುಧಾಕರ್ ಅಂತಿಮ ದರ್ಶನ ಪಡೆದ ಎಂ.ಬಿ. ಪಾಟೀಲ್: ಕುಟುಂಬ ಸದಸ್ಯರಿಗೆ ಸಾಂತ್ವನ

ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ ಹಿನ್ನಲೆಯಲ್ಲಿ ಸಚಿವ ಎಂ.ಬಿ. ಪಾಟೀಲ್ ಸಂತಾಪ ಸೂಚಿಸಿದ್ದಾರೆ.

ಡಿ. ಸುಧಾಕರ್ ಅವರ ಬೆಂಗಳೂರಿನ ನಿವಾಸಕ್ಕೆ ತೆರಳಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪ ನಮನ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಜನಪರ ಕಾಳಜಿ ಹೊಂದಿದ್ದ ಅವರು ಶಾಸಕರಾಗಿ, ಸಚಿವರಾಗಿ ನಾಡಿಗೆ ಸಲ್ಲಿಸಿದ ಸೇವೆ ಸದಾ ಸ್ಮರಣೀಯ. ಹಲವು ವರ್ಷಗಳ ಕಾಲ ಜೊತೆಯಾಗಿ ಕೆಲಸ ಮಾಡಿದ್ದ ಆತ್ಮೀಯ ಸಹೋದ್ಯೋಗಿಯನ್ನು ಕಳೆದುಕೊಂಡ ನೋವು ಮನಸ್ಸನ್ನು ಭಾರವಾಗಿಸಿದೆ, ಅವರ ನಿಧನ ನಂಬಲಾಗದ ಸಂಗತಿಯಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಆತ್ಮೀಯರೂ ಆದ ಡಿ. ಸುಧಾಕರ್ ಅವರ ನಿಧನದ ಸುದ್ದಿ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜನಸೇವೆಯನ್ನು ಧ್ಯೇಯವಾಗಿಸಿಕೊಂಡು ಸರಳತೆ, ಸೌಜನ್ಯ ಹಾಗೂ ಕಾಳಜಿಯಿಂದ ಜನರ ಮನ ಗೆದ್ದಿದ್ದರು. ಸಾರ್ವಜನಿಕ ಬದುಕಿನಲ್ಲಿ ತಮ್ಮದೇ ಆದ ಸೇವಾ ಮನೋಭಾವದಿಂದ ಸದಾ ಸ್ಮರಣೀಯರಾಗಿರುತ್ತಾರೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular