HomeKarnatakaಬೆಂಗಳೂರು ಸೇರಿ ಹಲವೆಡೆ ಮಳೆ ಮುನ್ಸೂಚನೆ: ಇಲ್ಲಿದೆ ಮಾಹಿತಿ

ಬೆಂಗಳೂರು ಸೇರಿ ಹಲವೆಡೆ ಮಳೆ ಮುನ್ಸೂಚನೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಭಾರೀ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ಗಾಳಿ. ಗುಡುಗು ಸಹಿತ ಮಳೆ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular