HomeKarnatakaJOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಉದ್ಯೋಗ ಮೇಳ ಆಯೋಜನೆ

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಉದ್ಯೋಗ ಮೇಳ ಆಯೋಜನೆ

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ, 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮಿನಿ “ಉದ್ಯೋಗಮೇಳ’ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಪಿರಾಮಲ್ ಪೈನಾನ್ಸ್ ಲಿಮಿಟೆಡ್ ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಮ್, ಮಡಿಕೇರಿ, ಇನ್‍ಸ್ಟಂಟ್ ಐಟಿ ಟೆಕ್ನಾಲಜಿ ಮೈಸೂರು, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ, ಮುತ್ತೂಟ್ ಮನಿ ಪೈನಾನ್ಸ್, ಮೈಸೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ಮಿನಿ ಉದ್ಯೋಗಮೇಳದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

2025-26ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ, 16 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/, ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು.

ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ:8050770004, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: [email protected], ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular