ಬೆಳಗಾವಿ: ಮುಂದಿನ 10 ದಿನದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬಾಗಲೂರು ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಚಿವರು ಮಾತನಾಡಿದರು.
ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣವನ್ನು ನಾಲ್ಕೈದು ದಿನದಲ್ಲಿ, ಏಪ್ರಿಲ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಎಂಟರಿಂದ ಹತ್ತು ದಿನದಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೆಲಸ ಎಂದರೆ ನನಗೆ ಹುಚ್ಚು. 2013ರ ಚುನಾವಣೆಯಲ್ಲಿ ಸೋಲು ಕಂಡ ನಂತರವೂ ಕೆಲಸ ಮಾಡುತ್ತಿದ್ದೆ. ಬೇರೆಯವರಂತೆ ನಾಟಕ ಮಾಡುವುದನ್ನು ಗೊತ್ತಿಲ್ಲ. ಸಮಾಜಕ್ಕೆ ಸಹಾಯವಾಗುವ ರೀತಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಮಾರ್ಚ್ ತಿಂಗಳ ಹಣವನ್ನು ನಾಲ್ಕರಿಂದ ಐದು ದಿನದಲ್ಲಿ ಮತ್ತು ಏಪ್ರಿಲ್ ತಿಂಗಳ ಹಣವನ್ನು ಮುಂದಿನ ಎಂಟರಿಂದ ಹತ್ತು ದಿನದಲ್ಲಿ ಪಾವತಿ ಮಾಡಲಾಗುವುದು ಎಂದು ಹೇಳಿದ್ದಾರೆ.

