ಬೀದರ್: ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಗಡಿಗೌಡಗಾಂವ್ ಗ್ರಾಮದಲ್ಲಿ ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋದ ಅಮಾನವೀಯ ಘಟನೆ ನಡೆದಿದೆ.
ಬಸವೇಶ್ವರ ಸರ್ಕಲ್ ಬಳಿ ಇರುವ ಕಿರಾಣಿ ಅಂಗಡಿ ಬಳಿ ಚರಂಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಮಗುವಿನ ಜನನದ ವಿಷಯ ಮುಚ್ಚಿಡುವ ಉದ್ದೇಶದಿಂದ ರಾತ್ರೋರಾತ್ರಿ ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಚರಂಡಿಯಲ್ಲಿ ನವಜಾತ ಶಿಶು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಹುಲಸೂರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಸರ್ಕಾರಿ ಆಸ್ಪತ್ರೆಗೆ ಮಗುವಿನ ಮೃತದೇಹ ಸಾಗಿಸಲಾಗಿದೆ.

