ಯಾದಗಿರಿ: ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಭಾರಿ ಮಳೆಯ ಆರ್ಭಟಕ್ಕೆ ಮನೆ ಗೋಡೆ ಕುಸಿದು ಬಾಲಕಿ ಮೃತಪಟ್ಟಿದ್ದಾಳೆ.
ಅಕ್ಷತಾ(8) ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ. ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದುದುರಂತ ಸಂಭವಿಸಿದೆ. ಘಟನೆಯಲ್ಲಿ ಬಾಲಕಿ ಅಕ್ಷತಾ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಯಾದಗಿರಿಯ ಯೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ದಪ್ಪ ಎಂಬುವರಿಗೆ ಸೇರಿದ ಅಡುಗೆ ಮನೆಯ ಗೋಡೆ ಕುಸಿದು ದುರಂತ ಸಂಭವಿಸಿದೆ. ಮನೆ ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಅವರ ಮೇಲೆ ಗೋಡೆ ಕುಸಿದಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್, ಜಿಪಂ ಸಿಇಒ ಲವೀಶ್ ಒರಡಿಯಾ, ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದೆ.

