ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 18 ಅರ್ಜಿ ಸಲ್ಲಿಸಲು ಕೊನೆಯ ದಿನ.
ಭೋವಿ ಜನಾಂಗದ ನಿರುದ್ಯೋಗಿಗಳಲ್ಲಿ ಸ್ವಯಂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗಮದ ಚಿತ್ರದುರ್ಗ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಇದೇ ಮೇ 18 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 9448154584 ಹಾಗೂ ಚಿತ್ರದುರ್ಗ ನಗರದ ಬಿ.ಡಿ. ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್ ಮುಂಭಾಗದ ಪಾಲಾಕ್ಷ ಕಾಂಪೌಂಡ್‍ನ 2ನೇ ಮಹಡಿಯಲ್ಲಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಿರುದ್ಯೋಗಿಗಳಿಗೆ ರುಡ್‍ಸೆಟ್ ಸಂಸ್ಥೆಯಿಂದ ಉದ್ಯೋಗ ತರಬೇತಿ
ಚಿತ್ರದುರ್ಗದ ರುಡ್‍ಸೆಟ್ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ಸ್ವಯಂ ಉದ್ಯೋಗ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 18ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಮಹಿಳೆಯರ 30 ದಿನಗಳ ಟೈಲರಿಂಗ್ ಹಾಗೂ 35 ದಿನಗಳು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿ, ಹಾಗೂ ಎಲ್ಲರಿಗೂ 38 ದಿನಗಳು ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 19 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹಾಗೂ ಸ್ವಯಂ ಉದ್ಯೋಗ ಮಾಡುವ ಆಸಕ್ತಿ ಇರಬೇಕು. ಸಂಬಂಧಪಟ್ಟ ಕೌಶಲದಲ್ಲಿ ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹೊಂದಿರುವ ಸ್ವವಿವರದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಮೇ 18, 2026 ರಂದು ನೇರವಾಗಿ ರುಡ್‍ಸೆಟ್ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8431329162, 8618282445, 8660627785, 9019244300 ಸಂಪರ್ಕಿಸಬಹುದು.

