HomeLatest NewsBIG NEWS: ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೈಕ್, ಕಾರು ಬಿಟ್ಟು ಮೆಟ್ರೋ, ಬಸ್ ಏರಿದ...

BIG NEWS: ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೈಕ್, ಕಾರು ಬಿಟ್ಟು ಮೆಟ್ರೋ, ಬಸ್ ಏರಿದ ಬೆಂಗಳೂರಿನ ನಾಗರಿಕರು

ಬೆಂಗಳೂರು: ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಇಂಧನ ಉಳಿತಾಯ ಮತ್ತು ಬಸ್, ಮೆಟ್ರೋ ದಂತಹ ಸಾರ್ವಜನಿಕ ಸಾರಿಗೆ ಬಳಸುವಂತೆ ಕರೆ ನೀಡಿರುವ ನೆನ್ನಲ್ಲೇ ಜನರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅದರಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಧನೈ ಮೋದಿ ಕರೆ ಬೆನ್ನಲ್ಲೇ ಬಹುತೇಕರು ಬೈಕ್, ಕಾರು ಬಿಟ್ಟು ಮೆಟ್ರೋ ಏರುತ್ತಿದ್ದಾರೆ.

ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆ ಕಡಿಮೆ ಮಾಡಿ ಎಲೆಖ್ರಿಕ್ ವಾಹನಗಳನ್ನು ಬಳಸಿ, ಬಸ್, ಮೆಟ್ರೋದಂತಹ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಕೇಂದ್ರ ಸಚಿವರು, ಅಧಿಕಾರಿಗಳು, ಬಿಜೆಪಿ ಆಡಳಿತವಿರುವ ಸಚಿವರು, ಶಾಸಕರು ಇದನ್ನು ಪ್ರಮುಖವಾಗಿ ಅನುಸರಿಸುವಂತೆ ಪ್ರಧಾನಿ ಮೋದಿ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ಕೇಂದ್ರ ಸಚಿವರು, ಅಧಿಕಾರಗಳ ಜೊತೆ ಮಹತ್ವದ ಸಭೆ ಕೂಡ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನ ಜನರು ಉತ್ತಮವಾಗಿ ಸ್ಪಂದಿಸುತ್ತಿದ್ದು, ಬಸ್ ಹಾಗೂ ಮೆಟ್ರೋಗಳಲ್ಲಿ ಹೆಚ್ಚಾಗಿ ಪ್ರಯಾಣಿಸುತ್ತಿದ್ದಾರೆ.

ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ದೇಶದ ಹಿತದೃಷ್ಟಿಯಿಂದ ಪ್ರಧಾನಿಯವರ ಮಾತು ಸರಿಯಾಗಿದೆ. ನಾವು ಬೈಕ್ ಬಳಸುವ ಬದಲು ಮೆಟ್ರೋ ಬಳಸುವುದರಿಂದ ಹಣ ಮತ್ತು ಸಮಯ ಎರಡೂ ಉಳಿತಾಯವಾಗುತ್ತದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಕೆಲವು ಪ್ರಯಾಣಿಕರು ತಾವು ಇಷ್ಟು ದಿನ ಕಚೇರಿಗೆ ಹೋಗಲು ಬೈಕ್ ಬಳಸುತ್ತಿದ್ದೆವು, ಆದರೆ ಈಗ ಮೆಟ್ರೋದಲ್ಲಿ ಸಂಚರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಆಮದು ಕಡಿಮೆ ಮಾಡುವುದರಿಂದ ಭಾರತದ ಆರ್ಥಿಕತೆಗೆ ಬಲ ಸಿಗಲಿದೆ ಎಂಬ ಜಾಗೃತಿ ಜನರಲ್ಲಿ ಮೂಡುತ್ತಿದೆ.

ಇದೇ ವೇಳೆ, ದೇಶಾದ್ಯಂತ ಡೀಸೆಲ್ ಅಭಾವದ ಎಚ್ಚರಿಕೆಯನ್ನು ನೀಡಲಾಗಿದೆ. ಬಲ್ಕ್ ಸರಬರಾಜು ದರ ಮತ್ತು ಚಿಲ್ಲರೆ ಮಾರಾಟ ದರದ ನಡುವಿನ ವ್ಯತ್ಯಾಸದಿಂದಾಗಿ ದೊಡ್ಡ ಕೈಗಾರಿಕೆಗಳು ನೇರವಾಗಿ ಚಿಲ್ಲರೆ ಪೆಟ್ರೋಲ್ ಬಂಕ್‌ಗಳಿಂದ ಹೈ ಸ್ಪೀಡ್ ಡೀಸೆಲ್ (HSD) ಖರೀದಿ ಮಾಡುತ್ತಿವೆ. ಇದರಿಂದ ಚಿಲ್ಲರೆ ಬಂಕ್‌ಗಳಲ್ಲಿ ದಾಸ್ತಾನು ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಇಂಡಿಯನ್ ಆಯಿಲ್ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಪ್ರಧಾನಿ ಮೋದಿ ಅವರಿಗೆ ದೂರು ಸಲ್ಲಿಸಿದೆ. ಕೈಗಾರಿಕೆಗಳು ನಿಗದಿತ ಬಲ್ಕ್ ಸರಬರಾಜು ಮೂಲಕವೇ ಇಂಧನ ಪಡೆಯುವಂತೆ ಕ್ರಮ ಕೈಗೊಳ್ಳಲು ಸಂಘಟನೆ ಆಗ್ರಹಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular