HomeLatest NewsNEET-UG ಪರೀಕ್ಷೆ ರದ್ದು, ಈ ಅಕ್ರಮಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ : ಸಚಿವ ದಿನೇಶ್...

NEET-UG ಪರೀಕ್ಷೆ ರದ್ದು, ಈ ಅಕ್ರಮಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ : ಸಚಿವ ದಿನೇಶ್ ಗುಂಡೂರಾವ್ ಕಿಡಿ

ನೀಟ್-ಯುಜಿ (NEET-UG) 2026ರ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕರ್ನಾಟಕದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬೃಹತ್ ಅಕ್ರಮಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.

ಮೇ 3ರಂದು ನಡೆದಿದ್ದ NEET-UG 2026 ಪರೀಕ್ಷೆಯನ್ನು ರದ್ದುಗೊಳಿಸಿರುವ ನಿರ್ಧಾರವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಅಸಮರ್ಥತೆಯನ್ನು ಜಗತ್ತಿಗೆ ಸಾರಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರು ಮಾಡಿರುವ ಈ ಅಕ್ರಮಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ.

ದೇಶದ ಪರೀಕ್ಷಾ ವ್ಯವಸ್ಥೆಯನ್ನು ನಂಬಿಕಸ್ತವಾಗಿ ನಡೆಸಲು ಯೋಗ್ಯತೆ ಇಲ್ಲದ ಕೇಂದ್ರ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಿ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು. ಪದೇ ಪದೇ ಹಗರಣಗಳ ಅಡ್ಡೆಯಾಗುತ್ತಿರುವ ಈ ದೋಷಪೂರಿತ ‘ನೀಟ್’ ಪದ್ಧತಿಯನ್ನು ಸಂಪೂರ್ಣವಾಗಿ ಕಿತ್ತೊಗೆಯಿರಿ. ದೆಹಲಿಯ ರಿಮೋಟ್ ಕಂಟ್ರೋಲ್ ಮೂಲಕ ನಮ್ಮ ರಾಜ್ಯದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಿ, ನಮ್ಮ ರಾಜ್ಯದ ಪಾರದರ್ಶಕ ಸಿಇಟಿ (CET) ವ್ಯವಸ್ಥೆಗೆ ಪ್ರವೇಶಾತಿ ಅಧಿಕಾರವನ್ನು ಮರಳಿಸಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ರಿಕೆ ಸೋರಿಕೆ ಜಾಲದ ಹಿಂದೆ ಅಡಗಿರುವ ‘ದೊಡ್ಡ ತಲೆ’ಗಳನ್ನು ಪತ್ತೆಹಚ್ಚಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ಸಿಬಿಐ ತನಿಖೆಯಾಗಲೇಬೇಕು. ​ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ವಿದ್ಯಾರ್ಥಿಗಳ ಪರವಾಗಿ ತಳೆದಿರುವ ಪ್ರಬಲ ನಿಲುವನ್ನು ನಾನು ಸಂಪೂರ್ಣವಾಗಿ ಸಮರ್ಥಿಸುತ್ತೇನೆ. ವಿದ್ಯಾರ್ಥಿಗಳೇ, ಧೈರ್ಯಗೆಡಬೇಡಿ. ಈ ಅನ್ಯಾಯದ ವಿರುದ್ಧ ನಮ್ಮ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ. ನಿಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿರಂತರ ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular