HomeLive Newsತುರ್ತು ಸೇವಾ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು

ತುರ್ತು ಸೇವಾ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪೊಲೀಸ್ ಕಾನ್ಸ್‌ಟೇಬಲ್​ವೊಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಶೃಂಗೇರಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಸತೀಶ್ (53) ಮೃತ ದುರ್ದೈವಿ. 112 ತುರ್ತು ಸೇವಾ ವಾಹನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಸತೀಶ್ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಇತರ ಸಿಬ್ಬಂದಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೂಲತಃ ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದವರಾದ ಸತೀಶ್, ಈ ಹಿಂದೆ ಭಾರತೀಯ ಸೇನೆಯಲ್ಲಿಯೂ 17 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿದ್ದರು. ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್‌ನಲ್ಲಿ (MEG) ನಾಯಿಬ್ ಸುಬೇದಾರ್ ಆಗಿದ್ದರು. ಸೇನೆಯಿಂದ ನಿವೃತ್ತರಾದ ಬಳಿಕ ಕಳೆದ 10 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೃಂಗೇರಿ ಪೊಲೀಸ್ ಠಾಣಾಧಿಕಾರಿ ಈ ಬಗ್ಗೆ ಮಾತನಾಡಿದ್ದು, ನಿನ್ನೆ ಮಧ್ಯ ರಾತ್ರಿ ಶೃಂಗೇರಿಯ ಬೊಮ್ಮಲಾಪುರದಲ್ಲಿ ಗಲಾಟೆ ನಡೆಯುತ್ತಿದೆ ಎಂದು 112ಗೆ ತುರ್ತು ಕರೆ ಬಂದಿತ್ತು. ಮಾಹಿತಿ ಮೇರೆಗೆ ನಮ್ಮ ತುರ್ತು ಸೇವಾ ವಾಹನದಲ್ಲಿ ತೆರಳುವ ವೇಳೆಯಲ್ಲಿ ಹೃದಯಘಾತದಿಂದ ಸತೀಶ್ ಅವರು ಸಾವನ್ನಪ್ಪಿದ್ದಾರೆ. ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಲಿಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular